
ಹಿರಿಯೂರು :
ದೊಡ್ಡಘಟ್ಟ ಗ್ರಾಮದ ಸಮಗ್ರ ಅಭಿವೃದ್ಧಿಗೆ ಇದು ಮತ್ತೊಂದು ಮಹತ್ವದ ಹೆಜ್ಜೆಯಾಗಿದ್ದು, ಸಿ.ಸಿ.ರಸ್ತೆಗಳ ನಿರ್ಮಾಣದಿಂದ ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ಸುಗಮ ಸಂಚಾರಕ್ಕೆ ಸಹಕಾರಿಯಾಗಲಿದೆ ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಹೇಳಿದರು.
ತಾಲ್ಲೂಕಿನ ದೊಡ್ಡಘಟ್ಟ ಗ್ರಾಮದ ಎಸ್.ಸಿ.ಕಾಲೋನಿಯಲ್ಲಿ ಸಿ.ಸಿ.ರಸ್ತೆ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆಯನ್ನು ನೆರವೇರಿಸಿ, ನಂತರ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಖಾದಿ ರಮೇಶ್, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸ್ಥಳೀಯ ಸಾರ್ವಜನಿಕರು ಉಪಸ್ಥಿತರಿದ್ದು, ಅಭಿವೃದ್ಧಿ ಕಾರ್ಯಕ್ಕೆ ಸಹಕಾರ ಮತ್ತು ಬೆಂಬಲ ವ್ಯಕ್ತಪಡಿಸಿದರು.
