
ಹಿರಿಯೂರು:
ನಗರದ ದುರ್ಗಿಗುಡಿ ಬಳಿ ಇರುವ ಶ್ರೀ ವಿಠ್ಠಲ ರುಕ್ಮಿಣಿ ಮಂದಿರದಲ್ಲಿ ಭಾವಸಾರ ಕ್ಷತ್ರಿಯ ಸಮಾಜದ ವತಿಯಿಂದ ವೈಕುಂಠ ಏಕಾದಶಿ ಪ್ರಯುಕ್ತ ಡಿಸೆಂಬರ್ 30ರ ಮಂಗಳವಾರದಂದು ವಿಶೇಷ ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂಬುದಾಗಿ ಭಾವಸಾರ ಕ್ಷತ್ರಿಯ ಸಮಾಜದ ಅಧ್ಯಕ್ಷರಾದ ಹೆಚ್.ಕೆ.ರುಕ್ಮಾಜಿ ರಾವ್ ಗುಜ್ಜಾರ್ ಅವರು ಮಾದ್ಯಮಗಳಿಗೆ ತಿಳಿಸಿದ್ದಾರೆ.
ಡಿಸೆಂಬರ್ 30ರ ಬೆಳಗ್ಗೆ 10.30ರಿಂದ ಮಧ್ಯಾಹ್ನ 12.30ರವರೆಗೆ ಹರಿವಾಣ ಸೇವೆ ಇರುತ್ತದೆ. ರಾತ್ರಿ 7ರಿಂದ 8.30ರವರೆಗೆ ಭಜನೆ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ಮತ್ತು ಮತ್ತು ಡಿಸೆಂಬರ್ 31ರಂದು ದ್ವಾದಶಿ ಪ್ರಯುಕ್ತ ಮಧ್ಯಾಹ್ನ 12ಗಂಟೆಗೆ ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಇರುತ್ತದೆ.

ಆದ್ದರಿಂದಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ದೇವಾಲಯಕ್ಕೆ ಆಗಮಿಸಿ ಸ್ವಾಮಿಯ ದರ್ಶನ ಪಡೆದು ದೇವರ ಕೃಪೆಗೆ ಪಾತ್ರರಾಗಬೇಕು ಎಂಬುದಾಗಿ ಅವರು ಮನವಿ ಮಾಡಿದ್ದಾರೆ.
