
ಹಿರಿಯೂರು:
ಗ್ರಾಮೀಣ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಸೌಲಭ್ಯಗಳನ್ನು ಒದಗಿಸುವ ಮೂಲಕ ಉತ್ತಮ ಭವಿಷ್ಯವನ್ನು ನಿರ್ಮಾಣ ಮಾಡಲು ಸರ್ಕಾರ ಸದಾ ಬದ್ಧವಾಗಿದೆ ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಅವರು ಹೇಳಿದರು.

ತಾಲ್ಲೂಕಿನ ಹರಿಯಬ್ಬೆ ಗ್ರಾಮದಲ್ಲಿ ವಿವೇಕ ಯೋಜನೆಯಡಿ 98.45 ಲಕ್ಷರೂಗಳ ವೆಚ್ಚದಲ್ಲಿ ನಿರ್ಮಿಸಲಾದ ಸರ್ಕಾರಿ ಪದವಿ ಪೂರ್ವ ಕಾಲೇಜಿನ 4 ನೂತನ ಕೊಠಡಿಗಳ ಉದ್ಘಾಟನೆಯನ್ನು ನೆರವೇರಿಸಿ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಪಕ್ಷದ ಮುಖಂಡರು, ಕಾರ್ಯಕರ್ತರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

