March 5, 2026
622126731_2040736396781022_832139321523212279_n

ಹಿರಿಯೂರು:

ಹಿರಿಯೂರು ನಗರ ಪೊಲೀಸ್ ಠಾಣೆಯ ನೂತನ ಪೊಲೀಸ್ ನಿರೀಕ್ಷಕರಾಗಿ ಆಗಿ ಅಧಿಕಾರ ವಹಿಸಿಕೊಂಡಿರುವ ಶ್ರೀಯುತ ಮಹಮ್ಮದ್ ಸಿರಾಜ್ ಇವರನ್ನು ಹಿರಿಯ ಪತ್ರಕರ್ತರು ಹಾಗೂ ರಾಜ್ಯ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ಆಲೂರುಹನುಮಂತರಾಯಪ್ಪ ಭೇಟಿ ಮಾಡಿ ಆತ್ಮೀಯವಾಗಿ ಶಾಲು ಹೊದಿಸಿ ಸನ್ಮಾನಿಸಿ, ಹಿರಿಯೂರು ನಗರಕ್ಕೆ ಆತ್ಮೀಯವಾಗಿ ಸ್ವಾಗತಿಸಿದರು.

ನಮ್ಮ ನಗರಕ್ಕೆ ನಿಮ್ಮ ಅವಧಿಯಲ್ಲಿ ಉತ್ತಮ ಆಡಳಿತ ದೊರೆಯುವಂತಾಗಿ, ನಗರದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಟ್ರಾಫಿಕ್ ಸಮಸ್ಯೆ ಸೇರಿದಂತೆ ಎಲ್ಲಾ ಸಮಸ್ಯೆಗಳು ಬಗೆಹರಿಯಲಿ ಹಾಗೂ ನಗರದ ನಾಗರೀಕರಿಗೆ ಜನಸ್ನೇಹಿಯಾಗಿ ಕೆಲಸ ಮಾಡುವ ಮೂಲಕ ಯಶಸ್ವಿ ಜನಪ್ರಿಯ ಪೋಲೀಸ್ ಅಧಿಕಾರಿಯಾಗಿ ಹೆಸರು ಮಾಡುವಂತಾಗಲಿ ಎಂಬುದಾಗಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಹಿರಿಯ ಪತ್ರಕರ್ತರಾದ ಪಿ.ಆರ್.ಸತೀಶ್ ಬಾಬು, ನಗರಸಭೆ ಮಾಜಿ ಅಧ್ಯಕ್ಷರು ಹಾಗೂ ವಿಜಯಲಕ್ಷ್ಮಿ ಟ್ರಾನ್ಸ್ ಪೋರ್ಟ್ ಮಾಲೀಕರಾದ ಜಬೀವುಲ್ಲಾ, “ಹಿರಿಯೂರುನ್ಯೂಸ್” ತಂಡದ ವರದಿಗಾರರಾದ ಉಮೇಶ್ ಯಾದವ್, ಶಿವರಾಜನಾಯ್ಕ ರವರು ಸೇರಿದಂತೆ ಇತರರು ಉಪಸ್ಥಿತರಿದ್ದು, ನೂತನ ಪೊಲೀಸ್ ಇನ್ಸ್ ಪೆಕ್ಟರ್ ರವರಿಗೆ ಅಭಿನಂದಿಸಿದರು.

About The Author

Leave a Reply

Your email address will not be published. Required fields are marked *