March 2, 2026
0000000002

ಹಿರಿಯೂರು :

ನಮ್ಮ ಭಾರತ ದೇಶ ಸ್ವಾತಂತ್ರ್ಯ ನಂತರ ಹರಿದು ಹಂಚಿಹೋಗಿದ್ದ ವಿವಿಧ ಭೂಪ್ರದೇಶಗಳನ್ನು ಒಗ್ಗೂಡಿಸಿಕೊಂಡು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ತನ್ನದೇ ಆದ ಆಡಳಿತ ವ್ಯವಸ್ಥೆಯನ್ನು ಹೊಂದಬೇಕೆಂಬ ಉದ್ದೇಶದಿಂದ ನೂತನ ಸಂವಿಧಾನ ರಚಿಸಿಕೊಂಡು, ಈ ಸಂವಿಧಾನವನ್ನು ದೇಶದಲ್ಲಿ ಜಾರಿಗೊಳಿಸಿದ ದಿನವನ್ನು ಗಣರಾಜ್ಯೋತ್ಸವ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂಬುದಾಗಿ ವಾಣಿವಿಲಾಸ ವಿದ್ಯಾಸಂಸ್ಥೆಯ ಕಾರ್ಯದರ್ಶಿಗಳಾದ ಆಲೂರುಹನುಮಂತರಾಯಪ್ಪ ಹೇಳಿದರು.

ನಗರದ ನೆಹರು ಕ್ರೀಡಾಂಗಣದಲ್ಲಿರುವ ವಾಣಿವಿಲಾಸ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ 77 ನೇ ಗಣರಾಜ್ಯೋತ್ಸವದ ದ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿ ನಂತರ ಅವರು ಮಾತನಾಡಿದರು.

ನಮ್ಮ ಭಾರತ ದೇಶದ ಸಂವಿಧಾನದ ರಚನೆಯಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ ಕೊಡುಗೆ ಅವಿಸ್ಮರಣೀಯವಾದದ್ದು, ಭಾರತ ಸಂವಿಧಾನದ ಕರಡು ಸಮಿತಿಯ ಅಧ್ಯಕ್ಷರಾಗಿ ಹಲವಾರು ದೇಶಗಳ ಸಂವಿಧಾನವನ್ನು ಆಳವಾಗಿ ಅಧ್ಯಯನ ಮಾಡಿ, ಜಗತ್ತಿನಲ್ಲೇ ಅತ್ಯುತ್ತಮವಾದ ಸಂವಿಧಾನವನ್ನು ರಚಿಸಿದರು ಎಂದರಲ್ಲದೆ,

ಡಾ.ಅಂಬೇಡ್ಕರ್ ರವರು ರಚಿಸಿದ ಭಾರತದ ಸಂವಿಧಾನವು ಸಮಾಜದ ಸರ್ವಜನಾಂಗದವರಿಗೂ ಸ್ವಾತಂತ್ರ, ಸಮಾನತೆ, ಸಹಬಾಳ್ವೆ ಹಾಗೂ ಸಾಮಾಜಿಕ ನ್ಯಾಯ ಒದಗಿಸುತ್ತಿರುವ ಸಂವಿಧಾನವಾಗಿದ್ದು, ಈ ಸಂವಿಧಾನದ ರಚನೆಯ ಫಲವಾಗಿ ದೇಶದ ಮಹಿಳೆಯರು, ಶೋಷಿತರು, ಹಿಂದುಳಿದವರನ್ನು ಶಿಕ್ಷಣವಂತರಾಗಲು  ಸಾಧ್ಯವಾಗಿದೆ ಎಂಬುದಾಗಿ ಅವರು ಹೇಳಿದರು.

ಈ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತರಾದ ಪಿ.ಆರ್.ಸತೀಶ್ ಬಾಬು, ವಾಣಿವಿಲಾಸ ವಿದ್ಯಾಸಂಸ್ಥೆಯ ಮುಖ್ಯಶಿಕ್ಷಕಿಯಾದ ಶ್ರೀಮತಿ ಸೌಮ್ಯ, ವ್ಯವಸ್ಥಾಪಕಿ ಶ್ರೀಮತಿ ವಸಂತ, ಆಡಳಿತಾಧಿಕಾರಿ ಶ್ರೀಮತಿ ಹೇಮಲತಾ, ಕೋ-ಆರ್ಡಿನೇಟರ್ ಶ್ರೀಮತಿ ರಚನಾ, ಶಿಕ್ಷಕಿಯರುಗಳಾದ ಶ್ರೀಮತಿ ರಜಿಯಾ, ಶ್ರೀಮತಿ ಗಂಗಮ್ಮ, ಶ್ರೀಮತಿ ರಂಜಿತಾ, ಶ್ರೀಮತಿ ಮುಬೀನಾ, ಶ್ರೀಮತಿ ದ್ರಾಕ್ಷಾಯಣಿ, ಶ್ರೀಮತಿ ಸಾಧಿಕಾ, ಶ್ರೀಮತಿ ಮಮತಾ, ಶ್ರೀಮತಿ ಅಕ್ಷಿತಾ, ಶ್ರೀಮತಿ ಹೇಮಲತಾ, ಪೂಜಾ, ಕಾವ್ಯ, ಕಾರ್ಯಕ್ರಮ ಸಂಯೋಜಕರಾದ ಶ್ರೀಮತಿ ಭಾಗ್ಯ, ಶ್ರೀಮತಿ ಜಯಸುಧಾ, ಶಿಕ್ಷಕರುಗಳಾದ ಉಮೇಶ್ ಯಾದವ್, ಶಿವರಾಜ್ ನಾಯ್ಕ ಸೇರಿದಂತೆ ಶಾಲಾಸಿಬ್ಬಂದಿವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *