
ಹಿರಿಯೂರು :
ನಮ್ಮ ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀಯುತ ಸಿದ್ಧರಾಮಯ್ಯನವರು ರಾಜ್ಯದಲ್ಲಿ ಕನ್ನಡ ಭಾಷೆಗೆ ಅಗ್ರಗಣ್ಯ ಸ್ಥಾನವನ್ನು ಕೊಟ್ಟಿದ್ದಾರೆ, ಈ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳು, ಕೋರ್ಟ್ ಗಳು, ಬ್ಯಾಂಕ್ ಗಳು ಅಲ್ಲದೆ ಕಂಪನಿಗಳಲ್ಲಿಯೂ ಸಹ ಕನ್ನಡ ಭಾಷೆಯನ್ನು ಬಳಸುವಂತೆ ಹಾಗೂ ಉದ್ಯೋಗದಲ್ಲಿ ಕನ್ನಡಿಗರಿಗೆ ಮೊದಲ ಆದ್ಯತೆಯನ್ನು ನೀಡುವಂತೆ ಕ್ರಮಕೈಗೊಳ್ಳಲಾಗಿದೆ, ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಹೇಳಿದರು.
ನಗರದ ನೆಹರು ಮೈದಾನದಲ್ಲಿ ರಾಜಮಾತೆ ಕೆಂಪನಂಜಮ್ಮಣ್ಣಿ ವೇದಿಕೆಯಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದ ಹಿರಿಯೂರು ತಾಲ್ಲೂಕು 7 ನೇಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯನ್ನುವಹಿಸಿ, ಕಾರ್ಯಕ್ರಮವನ್ನು ಉದ್ಘಾಟಿಸಿ, ನಂತರ ಅವರು ಮಾತನಾಡಿದರು.

ದೇಶದ ವಿವಿಧ ರಾಜ್ಯಗಳಿಂದ ಕರ್ನಾಟಕದಲ್ಲಿ ವ್ಯಾಪಾರ-ವ್ಯವಹಾರ, ಉದ್ಯೋಗಕ್ಕಾಗಿ ಬಂದಿರುವ ಇತರೆ ಭಾಷೀಯರೊಂದಿಗೆ ಜೊತೆಗೂಡಿ, ಸಾಮರಸ್ಯದ ಸಹಬಾಳ್ವೆ ನಡೆಸುತ್ತಿರುವ ಕನ್ನಡಿಗರಾದ ನಾವುಗಳು, ಅವರ ಭಾಷೆಯನ್ನು ಕಲಿತು ಬರೀ ಅವರ ಭಾಷೆಯಲ್ಲೇ ಮಾತನಾಡದೇ ಅವರಿಗೆ ಕನ್ನಡ ಭಾಷೆಯ ಮೇಲೆ ಪ್ರೀತಿ-ಅಭಿಮಾನ, ಗೌರವ ಬೆಳೆಸುವ ಮೂಲಕ ಕನ್ನಡ ಕಲಿಯಲು ಪ್ರೇರೇಪಿಸಿ, ಕನ್ನಡವನ್ನು ಉಳಿಸಿ, ಬೆಳೆಸಬೇಕು ಎಂದರು.
ಹಿಂದಿನ ಕಾಲದಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಕನ್ನಡ ಮಾಧ್ಯಮಕ್ಕೆ ಹೆಚ್ಚು ಪ್ರಾಧಾನ್ಯತೆ ಕೊಡಲಾಗಿತ್ತು, ಆದರೆ ಇಂದಿನ ಪೋಷಕರು ಆಂಗ್ಲ ಮಾಧ್ಯಮದ ವ್ಯಾಮೋಹಕ್ಕೆ ಒಳಗಾಗಿ ಕನ್ನಡ ಭಾಷೆಯನ್ನು ನಿರ್ಲಕ್ಷಿಸಿರುವುದು ನಿಜಕ್ಕೂ ವಿಷಾದನೀಯ ಸಂಗತಿಯಾಗಿದ್ದು, ಎಲ್ಲಾ ಕರುನಾಡಿನ ಕನ್ನಡಿಗರು, ಕನ್ನಡಪರ ಹೋರಾಟಗಾರರು ತಮ್ಮ ಮಕ್ಕಳನ್ನು ಕನ್ನಡದ ಸರ್ಕಾರಿ ಶಾಲೆಗಳಿಗೆ ಸೇರಿಸುವ ಮೂಲಕ ಕನ್ನಡ ಕಲಿಕೆಗೆ ಹೆಚ್ಚು ಪ್ರಾಶಸ್ತ್ಯ ನೀಡುವಂತೆ ಮನವಿ ಮಾಡಿದರು.

ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ನುಡಿದಂತೆ ನಡೆಯುವ ಸರ್ಕಾರವಾಗಿದ್ದು, ರಾಜ್ಯದಲ್ಲಿ 5 ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಬದ್ಧತೆಯನ್ನು ಪ್ರದರ್ಶಿಸಿದೆ, ಜೊತೆಗೆ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಉತ್ತಮ ಕ್ರಮಕೈಗೊಂಡಿದ್ದು, ನಮ್ಮ ತಾಲ್ಲೂಕಿನ ಎಲ್ಲಾ ಹೋಬಳಿಗಳಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸಲು ಮುಂದಾಗಿದೆ ಎಂದರಲ್ಲದೆ,
ತಾಲ್ಲೂಕಿನ ರೈತರು ಪದೇಪದೇ ಹೋರಾಟ ನಡೆಸುವುದನ್ನು ಬಿಟ್ಟು ಶಾಂತಿಯನ್ನು ಕಾಪಾಡಿಕೊಳ್ಳಬೇಕು, ಭದ್ರಾ ಮೇಲ್ದಂಡೆ ಯೋಜನೆಯ ಮೂಲಕ ವಾಣಿವಿಲಾಸ ಜಲಾಶಯಕ್ಕೆ ನೀರು ಹರಿಸುವ ಕೆಲಸ ಭರದಿಂದ ಸಾಗುತ್ತಿದ್ದು, ಮಾರ್ಚ್ ತಿಂಗಳ ಒಳಗಾಗಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಈಗಾಗಲೇ ಸರ್ಕಾರದಿಂದ ಚಿಂತನೆ ನಡೆಸಲಾಗುತ್ತಿದೆ, ಭದ್ರೆ ನೀರು ವಿವಿಸಾಗರಕ್ಕೆ ಹರಿಯುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದರಲ್ಲದೆ,

ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಚಟುವಟಿಕೆಗಳನ್ನು ಯಶಸ್ವಿಗೊಳಿಸಲು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿಗೆ ಒಂದು ನಿವೇಶನದ ವ್ಯವಸ್ಥೆ ಮಾಡಿಕೊಡುವಂತೆ ಈ ಸಮ್ಮೇಳನದಲ್ಲಿ ಮನವಿ ಮಾಡಿದ್ದೀರಾ, ನಿಮ್ಮ ಮನವಿಗೆ ನಾನು ಬದ್ಧನಾಗಿದ್ದು, ಕನ್ನಡ ಸಾಹಿತ್ಯ ಪರಿಷತ್ತಿನ ಕಟ್ಟಡ ನಿರ್ಮಾಣಕ್ಕೆ ಸೂಕ್ತ ನಿವೇಶನದ ವ್ಯವಸ್ಥೆ ಮಾಡಿಕೊಂಡುವಂತೆ ವೇದಿಕೆಯಲ್ಲಿಯೇ ಉಪಸ್ಥಿತರಿದ್ದ ಪೌರಾಯುಕ್ತರಾದ ಎ.ವಾಸೀಂರವರಿಗೆ ಸೂಚನೆ ನೀಡಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ರವರಿಗೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಶಾಲು ಹೊದಿಸಿ, ಸನ್ಮಾನಿಸಿ, ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು.
ಈ ಸಮ್ಮೇಳನದ ಅಧ್ಯಕ್ಷತೆಯನ್ನು ಹಿರಿಯ ಪತ್ರಕರ್ತರು ಹಾಗೂ ಸಾಹಿತಿಗಳಾದ ಪ್ರೋ.ಎಂ.ಜಿ.ರಂಗಸ್ವಾಮಿ ವಹಿಸಿದ್ದರು. ವಾಣಿ ಸಕ್ಕರೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಆರ್.ಮಹೇಶ್ ಆಶಯ ನುಡಿಗಳನ್ನಾಡಿದರು. ವೇದಿಕೆಯಲ್ಲಿ ಬಂಡಾಯ ಸಾಹಿತಿಗಳಾದ ಡಾ.ಕಾಳೇಗೌಡನಾಗರಾಜ್, ಮಾಹಿತಿ ಹಕ್ಕು ಆಯೋಗ ಆಯುಕ್ತರಾದ ಎಚ್.ಎ.ರುದ್ರಣ್ಣ ಹರ್ತಿಕೋಟೆ, ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಕೆ.ಎಂ.ಶಿವಸ್ವಾಮಿ, ಕಸಾಪ ತಾಲೂಕು ಅಧ್ಯಕ್ಷ ಸಿ.ರಾಮಚಂದ್ರಪ್ಪ, ಕಸಾಪ ಕೋಶಾಧ್ಯಕ್ಷರಾದ ಜಿ.ಪ್ರೇಮ್ ಕುಮಾರ್, ತಾಲ್ಲೂಕು ತಹಶೀಲ್ದಾರರಾದ ಸಿದ್ದೇಶ್, ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಡಾ.ಜಿ.ಕೆ.ಪ್ರಮೋದ್, ಕ್ಷೇತ್ರಶಿಕ್ಷಣಾಧಿಕಾರಿ ಸಿ.ಎಂ.ತಿಪ್ಪೇಸ್ವಾಮಿ, ನಗರಸಭೆ ಪೌರಾಯುಕ್ತ ಎ.ವಾಸಿಂ, ಕ.ಸಾ.ಪ ಗೌ.ಸಲಹೆಗಾರರುಗಳಾದ ಖಾದಿರಮೇಶ್, ಈರಲಿಂಗೇಗೌಡ, ಶಶಿಕಲಾ ರವಿಶಂಕರ್, ಕಾರ್ಯಕಾರಿ ಸಮಿತಿ ಸದಸ್ಯರಾದ ಹರ್ತಿಕೋಟೆ ಮಹಾಸ್ವಾಮಿ, ಹೋಬಳಿ ಅಧ್ಯಕ್ಷರಾದ ಪೋಲೀಸ್ ಭೇಟೆ ಪ್ರಸನ್ನ, ತಾಲ್ಲೂಕು ಗೌ.ಕಾರ್ಯದರ್ಶಿ ಜೆ.ನಿಜಲಿಂಗಪ್ಪ, ರೈತ ಸಂಘದ ರಾಜ್ಯ ವಿಭಾಗೀಯ ಉಪಾಧ್ಯಕ್ಷ ಕೆ.ಸಿ.ಹೊರಕೇರಪ್ಪ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಜಾನಪದ ವಿದ್ವಾಂಸರಾದ ಪ್ರೋ.ವೀರಸಬೀಹಳ್ಳಿ ಶಿವಣ್ಣ, ಪ್ರೋ.ಶಿವಲಿಂಗಪ್ಪ, ಮಾಜಿ ತಾ.ಪಂ.ಸದಸ್ಯ ಮೊಹಮ್ಮದ್ ಫಕ್ರುದ್ದೀನ್, ಕ್ಷೇತ್ರ ಸಮನ್ವಯಾಧಿಕಾರಿ ಆರ್.ಟಿ.ಶ್ರೀನಿವಾಸ್, ಸಮಾಜ ಸೇವಕರಾದ ಗಿಡ್ಡೋಬನಹಳ್ಳಿ ಅಶೋಕ್, ಜಿಲ್ಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ಎಂ.ರಮೇಶ್ ನಾಯ್ಕ, ಸರ್ಕಾರಿ ನೌಕರರ ಸಂಘದ ಖಜಾಂಚಿ ಬಿ.ಆರ್.ಶ್ರೀನಿವಾಸ್, ನಗರಸಭೆ ಮಾಜಿ ಅಧ್ಯಕ್ಷೆ ಶಿವರಂಜಿನಿಯಾದವ್, ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಎಂ.ಡಿ.ಸಣ್ಣಪ್ಪ, ಗ್ಯಾರೆಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಟಿ.ಕೃಷ್ಣಮೂರ್ತಿ, ಉಪಾಧ್ಯಕ್ಷ ಕಲ್ಲಹಟ್ಟಿ ಹರೀಶ್, ಜಿ.ಪಂ.ಸದಸ್ಯೆ ಗೀತಾನಾಗಕುಮಾರ್, ಕಂದಿಕೆರೆಸುರೇಶ್ ಬಾಬು, ಜಿ.ಪಂ.ಮಾಜಿಸದಸ್ಯ ಆರ್.ನಾಗೇಂದ್ರನಾಯ್ಕ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆರ್.ರಮೇಶ್, ಕೆಡಿಪಿ ಸದಸ್ಯ ತಿಮ್ಮಣ್ಣ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜಿ.ಹನುಮಂತರೆಡ್ಡಿ, ಟಿ.ದಿವಾಕರ್, ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಜಿ.ಎಲ್.ಮೂರ್ತಿ, ಸಮಾಜಸೇವಕ ಎಚ್.ಜೆ.ಶ್ರೀನಿವಾಸ್, ರೈತ ಮುಖಂಡರಾದ ಕಸವನಹಳ್ಳಿ ರಮೇಶ್, ಕೆ.ಟಿ.ತಿಪ್ಪೇಸ್ವಾಮಿ, ಹಿರಿಯ ಪತ್ರಕರ್ತರಾದ ಆಲೂರು ಹನುಮಂತರಾಯಪ್ಪ, ಪಿ.ಆರ್.ಸತೀಶ್ ಬಾಬು, ಪ್ರಾಧ್ಯಾಪಕರಾದ ಡಾ.ಡಿ.ಧರಣೇಂದ್ರಯ್ಯ, ಕರ್ನಾಟಕ ಜಾನಪದ ಪರಿಷತ್ ಅಧ್ಯಕ್ಷರಾದ ಎಸ್.ಟಿ.ರಂಗಸ್ವಾಮಿ ಸಕ್ಕರ, ನಿವೃತ್ತ ಪ್ರಾಂಶುಪಾಲ ಡಾ.ವೀರಣ್ಣ, ಹಿರಿಯ ರಂಗಕರ್ಮಿ ಮಲ್ಲಪ್ಪನಹಳ್ಳಿ ಮಹಾಲಿಂಗಯ್ಯ, ಕ.ಸಾಪ.ನಿಕಟಪೂರ್ವ ಅಧ್ಯಕ್ಷ ಡಾ.ನಾಗೇಶ್, ವಕೀಲರಾದ ಸುರೇಶ್, ಸಹಾಯಕ ಪ್ರಾಧ್ಯಾಪಕರಾದ ಬಸವರಾಜು ಬೆಳಗಟ್ಟ, ಭಾರತೀಯ ಕಿಸಾನ್ ಸಂಘದ ಅಧ್ಯಕ್ಷ ಗಡಾರಿ ಕೃಷ್ಣಪ್ಪ, ಸೇರಿದಂತೆ ಅನೇಕ ಗಣ್ಯರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
ಆರಂಭದಲ್ಲಿ ಕ.ಸಾಪ.ಗೌ.ಕಾರ್ಯದರ್ಶಿ ಜೆ.ನಿಜಲಿಂಗಪ್ಪ ಸ್ವಾಗತಿಸಿದರು. ಕೊನೆಯಲ್ಲಿ ಕೆ.ಜಿ.ಹನುಮಂತರಾಯ ವಂದಿಸಿದರು. ಚಿತ್ರದುರ್ಗ ಆಕಾಶವಾಣಿಯ ಕೆ.ನವೀನ್ ಮಸ್ಕಲ್ ಕಾರ್ಯಕ್ರಮ ನಿರೂಪಿಸಿದರು.

