
ಹಿರಿಯೂರು :
ತಾಲೂಕಿನ ಆಲೂರು ಗ್ರಾಮದಲ್ಲಿ ಉಪ್ಪಾರ ಸಮಾಜದ ಅಧ್ಯಕ್ಷರಾದ ದಿ.ರಾಮಣ್ಣ ಅವರ ನಿವಾಸಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ರವರು ರಾಮಣ್ಣ ಅವರ ಅಗಲಿಕೆಯ ನಮಗೆ ಅತ್ಯಂತ ನೋವನ್ನು ತಂದಿದೆ, ಭಗವಂತ ನಿಮಗೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂಬುದಾಗಿ ಸಂತಾಪ ಸೂಚಿಸಿದರು.

ಈ ಸಂದರ್ಭದಲ್ಲಿ ಉಪ್ಪಾರ ಸಮಾಜದ ಅಧ್ಯಕ್ಷರಾದ ದಿ.ರಾಮಣ್ಣರವರ ಕುಟುಂಬಸ್ಥರು, ಕಾಂಗ್ರೆಸ್ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
