
ಹಿರಿಯೂರು :
ರಾಜ್ಯದ ಒಕ್ಕಲಿಗ-ಕುಂಚಿಟಿಗರ ಸಂಘದ ಸಂಸ್ಥಾಪಕ ಅಧ್ಯಕ್ಷರು ಹಾಗೂ ಅನೇಕ ಬಡ ವಿದ್ಯಾರ್ಥಿಗಳಿಗೆ ಹಾಗೂ ಗ್ರಾಮೀಣ ಯುವಕರಿಗೆ ವಸತಿ ಹಾಗೂ ಉದ್ಯೋಗವನ್ನು ಕಲ್ಪಿಸುತ್ತಿದ್ದಂತ ಉದಾರಿಗಳು ಗ್ರಾಮೀಣ ರೈತರ ಮಕ್ಕಳಿಗೆ “ಕೃಷಿಕ್ ಫೌಂಡೇಶನ್” ಮೂಲಕ ಐಎಎಸ್ ಕೋಚಿಂಗ್ ಸೆಂಟರ್ ಅನ್ನು ಪ್ರಾರಂಭಿಸಿದಂತಹ ನಿವೃತ್ತ ಐ.ಎ.ಎಸ್ ಅಧಿಕಾರಿಗಳಾದ ಸಿ.ಚಿಕಣ್ಣನವರು ನಿಧನ ಹೊಂದಿದ್ದು, ಅವರ ನಿಧನಕ್ಕೆ “ಹಿರಿಯೂರುನ್ಯೂಸ್” ತಂಡದ ವತಿಯಿಂದ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಗಿದೆ.
ಶ್ರೀಯುತ ಸಿ.ಚಿಕ್ಕಣ್ಣನವರು ನಮ್ಮ ಅತ್ಯಂತ ಹತ್ತಿರದ ಬಂಧುಗಳಾಗಿದ್ದು, ಅವರ ನಿಧನದ ದುಃಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತನು ಅವರ ಕುಟುಂಬಸ್ಥರಿಗೆ ಕರುಣಿಸಲಿ ಎಂಬುದಾಗಿ “ಹಿರಿಯೂರುನ್ಯೂಸ್” ತಂಡದ ವತಿಯಿಂದ ಪತ್ರಕರ್ತರುಗಳಾದ ಆಲೂರುಹನುಮಂತರಾಯಪ್ಪ ಹಾಗೂ ಪಿ.ಆರ್.ಸತೀಶ್ ಬಾಬು, ಗೋಸಿಕೆರೆ ರಂಗನಾಥ್, ಕೇಶವಮೂರ್ತಿ, ಶ್ರೀಪಾದ್ ವಸಿಷ್ಠ, ಶಿವರಾಜ್ ನಾಯಕ್, ಪರಮೇಶ್ವರಪ್ಪ, ವೆಂಕಟೇಶ್, ಇರ್ಫಾನ್ ವುಲ್ಲಾ, ಹಿದಾಯತ್ ವುಲ್ಲಾ ಇವರುಗಳು ಸಂತಾಪ ಸೂಚಿಸಿದ್ದಾರೆ.

