
ಹಿರಿಯೂರು:
ಇದೇ ಫೆಬ್ರವರಿ 28 ಮತ್ತು ಮಾರ್ಚ್ 1ರಂದು ನೆಲಮಂಗಲ ತಾಲ್ಲೂಕಿನ ಹೆಗ್ಗುಂದ ಶ್ರೀವನಕಲ್ಲು ಮಲ್ಲೇಶ್ವರ ಮಹಾಸಂಸ್ಥಾನ ಸುಕ್ಷೇತ್ರ ಮಠದಲ್ಲಿ 52ನೇ ವರ್ಷದ ಶ್ರೀವನಕಲ್ಲುಮಲ್ಲೇಶ್ವರ ಜಾತ್ರಾ ಮಹೋತ್ಸವ ರಾಜ್ಯಮಟ್ಟದ ಕನ್ನಡ ಸಾಹಿತ್ಯ ಸಂಸ್ಕೃತಿ ಉತ್ಸವ ಹಾಗೂ ಪುಸ್ತಕ ಬಿಡುಗಡೆ ಸಮಾರಂಭವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದೆ ಎಂಬುದಾಗಿ ಡಾ.ಬಸವರಾಮಾನಂದ ಮಹಾಸ್ವಾಮೀಜಿ ಅವರು ಹೇಳಿದರು
ನಗರದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ವನಕಲ್ಲು ಶ್ರೀಸಿದ್ಧಯೋಗ, ಶ್ರೀಜಗಜ್ಯೋತಿ, ಶ್ರೀ ಬಾಲಗಂಗಾಧರನಾಥ ನಿರ್ಮಲಜ್ಯೋತಿ, ವಿಶ್ವ ಜ್ಯೋತಿ ಹಾಗೂ ಶರಣಶ್ರೀ ಪ್ರಶಸ್ತಿ ಸಮಾರಂಭ ಸಂಸ್ಕೃತೋತ್ಸವ ಹಾಗೂ ವಿವಿಧ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. ರಾಜ್ಯದಅನೇಕ ಗಣ್ಯರು ಭಾಗವಹಿಸಲಿದ್ದಾರೆ. ಕವಿಗೋಷ್ಠಿ ಜಾನಪದ ಸಂಸ್ಕೃತಿ ವಿಚಾರಗೋಷ್ಠಿ ಬ್ರಹ್ಮ ರಥೋತ್ಸವ ನಡೆಯಲಿದೆ ಆದ್ದರಿಂದ ಎಲ್ಲರೂ ಹೆಚ್ಚು ಹೆಚ್ಚು ಸಂಖ್ಯೆಯಲ್ಲಿ ಬಂದು ಭಾಗವಹಿಸಿ ಎಂಬುದಾಗಿ ಅವರು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಸಿ.ಬಿ.ಪಾಪಣ್ಣ, ತಾಲ್ಲೂಕು ಬಿ.ಜೆ.ಪಿ.ಅಧ್ಯಕ್ಷರಾದ ಕೆ.ಅಭಿನಂದನ್, ನಗರಸಭೆ ಮಾಜಿ ಅಧ್ಯಕ್ಷರಾದ ಶಿವರಂಜಿನಿಯಾದವ್, ಕಾಡುಗೊಲ್ಲ ಸಮಾಜದ ಮುಖಂಡರಾದ ಗೋಪಿಯಾದವ್, ಚಿತ್ತಯ್ಯ, ರಂಗಸ್ವಾಮಿ, ನಾಗಣ್ಣ, ರಾಜಣ್ಣ, ನಾಗರಾಜ್, ಆಕಾಶ್, ಶಶಿ, ತಮ್ಮಣ್ಣ, ಗೋವಿಂರಾಜ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

