
ಹಿರಿಯೂರು :
ಕೆಲದಿನಗಳ ಹಿಂದೆ ಕಿತ್ತೂರು ರಾಣಿ ಚೆನ್ನಮ್ಮ ಶಾಲೆಯಲ್ಲಿ ಆಹಾರ ಸೇವಿಸಿ ಮಕ್ಕಳು ಅಸ್ವಸ್ಥರಾಗಿದ್ದು, ಮಕ್ಕಳೇ ನಾಡಿನ ಭವಿಷ್ಯ ಅವರಿಗೆ ಉತ್ತಮ ಶಿಕ್ಷಣ ಮತ್ತು ಆರೋಗ್ಯಕರ ವಾತಾವರಣ ಕಲ್ಪಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದ್ದು, ಈ ನಿಟ್ಟಿನಲ್ಲಿ ಶಾಲೆ ಸ್ವಚ್ಛತೆ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಹೇಳಿದರು.
ತಾಲ್ಲೂಕಿನ ಐಮಂಗಲ ಗ್ರಾಮದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗೆ ಭೇಟಿ ನೀಡಿ, ಶಾಲೆಯ ಸಮಗ್ರ ಸ್ಥಿತಿಗತಿಯನ್ನು ಪರಿಶೀಲಿಸಿ, ನಂತರ ಅವರು ಮಾತನಾಡಿದರು

ಮಧ್ಯಾಹ್ನದ ಊಟದ ಗುಣಮಟ್ಟ ಹಾಗೂ ಮಕ್ಕಳಿಗೆ ನೀಡಲಾಗುತ್ತಿರುವ ಶಿಕ್ಷಣ ವ್ಯವಸ್ಥೆ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರಲ್ಲದೆ, ಮಕ್ಕಳ ಆರೋಗ್ಯ ಪೋಷಣೆ, ಆಹಾರ ಹಾಗೂ ಸುರಕ್ಷತೆ ವಿಷಯದಲ್ಲಿ ಯಾವ ರೀತಿಯ ನಿರ್ಲಕ್ಷವು ನಡೆಯಬಾರದು ಎಂಬುದಾಗಿ ಸಂಬಂಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಶಿಕ್ಷಕರು ಹಾಗೂ ಸಿಬ್ಬಂದಿವರ್ಗದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
