March 2, 2026
000001

ಹಿರಿಯೂರು :

ನಗರಸಭೆ ವತಿಯಿಂದ ಬೀದಿಬದಿ ವ್ಯಾಪಾರಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ಶ್ರಮಯೋಗಿ “ಮಾನ್ ಧನ್” ಕಾರ್ಡ್ ನೊಂದಣಿ ಮಾಡಿಕೊಡಲಾಗುತ್ತಿದ್ದು, ಫಲಾನುಭವಿಗಳು ತಮ್ಮ ಹೆಸರನ್ನು ನೊಂದಣಿ ಮಾಡಿಕೊಳ್ಳಬಹುದಾಗಿದೆ ಎಂಬುದಾಗಿ ನಗರಸಭೆ ಪೌರಾಯುಕ್ತರಾದ ಎ.ವಾಸೀಂ ಹೇಳಿದರು.

ನಗರದ ನಗರಸಭೆ ಆವರಣದಲ್ಲಿ ನಗರಸಭೆ ಮತ್ತು ಕಾರ್ಮಿಕ ಇಲಾಖೆ ಇವರುಗಳ ಸಹಯೋಗದೊಂದಿಗೆ ಪ್ರಧಾನಮಂತ್ರಿ ಆತ್ಮ ನಿರ್ಭರ ಯೋಜನೆ ಅಡಿ ಬೀದಿಬದಿ ವ್ಯಾಪಾರಿಗಳಿಗೆ ಹಮ್ಮಿಕೊಳ್ಳಲಾಗಿದ್ದ ಪ್ರಧಾನಮಂತ್ರಿ ಶ್ರಮಯೋಗಿ “ಮಾನ್ ಧನ್” ನೋಂದಣಿ ಕಾರ್ಯಗಾರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಬೀದಿಬದಿ ವ್ಯಾಪಾರಿಗಳ ಶ್ರೇಯೋಭಿವೃದ್ಧಿಗಾಗಿ ಕೇಂದ್ರ ಸರ್ಕಾರದಿಂದ ಈ ಸೌಲಭ್ಯ ನೀಡಲಾಗುತ್ತಿದ್ದು, ನಗರದ ಎಲ್ಲಾ ಬೀದಿಬದಿ ವ್ಯಾಪಾರಿಗಳು ಪ್ರಧಾನಮಂತ್ರಿ ಶ್ರಮಯೋಗಿ ಮಾನ್ ಧನ್ ಕಾರ್ಡ್ ಮಾಡಿಕೊಡಲಾಗುತ್ತಿದ್ದು, ವ್ಯಾಪಾರಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂಬುದಾಗಿ ಹೇಳಿದರು.

ನಗರಸಭೆ ಆವರಣದಲ್ಲಿ ಪ್ರಧಾನಮಂತ್ರಿ ಶ್ರಮಯೋಗಿ ಮಾನ್ ಧನ್ ನೋಂದಣಿ ಮಾಡಿಕೊಳ್ಳಬಹುದಾಗಿದ್ದು, ನಗರದ ಕಾರ್ಡ್ ಇಲ್ಲದಿರುವ ಎಲ್ಲಾ ಬೀದಿಬದಿ ವ್ಯಾಪಾರಿಗಳು ಕೂಡಲೇ ಬಂದು ಕಾರ್ಡ್ ನೊಂದಣಿ ಮಾಡಿಕೊಳ್ಳುವ ಮೂಲಕ ಸಬ್ಸಿಡಿ ಬ್ಯಾಂಕ್ ಲೋನ್ ಪಡೆಯಬಹುದು, ಹೆಚ್ಚಿನ ಮಾಹಿತಿಗಾಗಿ ಡೇ ನಲ್ಮ ಶಾಖೆಯನ್ನು ಸಂಪರ್ಕಿಸಬಹುದು ಎಂಬುದಾಗಿ ಅವರು ಹೇಳಿದರು.

ಈ ಕಾರ್ಯಕ್ರಮದಲ್ಲಿ ನಗರಸಭೆ ಪೌರಾಯುಕ್ತಾರಾದ ಎ.ವಾಸಿಂ, ಕಾರ್ಮಿಕ ಅಧಿಕಾರಿ ರಾಜಣ್ಣ, ಸಿಎಓ ನಾಗರತ್ನ, ನಗರಸಭೆ ವ್ಯವಸ್ಥಾಪಕರಾದ ಶ್ರೀಮತಿ ಮಂಜುಳಾ, ಮುಖಂಡರಾದ ಸಾದತ್ ವುಲ್ಲಾ, ಸೇರಿದಂತೆ ಕಚೇರಿ ಸಿಬ್ಬಂದಿಗಳು ಹಾಗೂ ಫಲಾನುಭವಿಗಳು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *