
ಹಿರಿಯೂರು :
ಸಾಮಾನ್ಯ ವಿದ್ಯಾರ್ಥಿಗಳ ಪಾಲನೆಗಿಂತ ಬುದ್ದಿಮಾಂದ್ಯ ಮಕ್ಕಳ ಪೋಷಣೆಯನ್ನು ಅತ್ಯಂತ ಶ್ರದ್ಧೆ ಹಾಗೂ ಆಸಕ್ತಿಯಿಂದ ಮಾಡಬೇಕಾಗಿದ್ದು, ಯಾವುದೇ ಸ್ವಾರ್ಥ ವಂಚನೆಗಳಿಲ್ಲದ ನಿರ್ಮಲ ಮನಸ್ಸಿನ ಈ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂಬುದಾಗಿ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಹೇಳಿದರು.

ನಗರದ ಟಿ.ಬಿ.ಸರ್ಕಲ್ ನಲ್ಲಿರುವ ಶ್ರೀಸಿದ್ದೇಶ್ವರ ಬುದ್ದಿಮಾಂದ್ಯ ಮಕ್ಕಳ ವಸತಿ ಶಾಲೆಗೆ ಭೇಟಿ ನೀಡಿ, ಶಾಲೆಯ ಸ್ವಚ್ಛತೆ ಹಾಗೂ ನಿರ್ವಹಣೆ, ವಿದ್ಯಾರ್ಥಿಗಳ ಯೋಗಕ್ಷೇಮ ವಿಚಾರಿಸಿ, ನಂತರ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಹಾಗೂ ಬುದ್ದಿಮಾಂದ್ಯ ಮಕ್ಕಳ ವಸತಿ ಶಾಲೆಯ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

