
ಹಿರಿಯೂರು:
ಮಹಿಳೆಯರ ಸ್ವಾವಲಂಬನೆ ಮತ್ತು ಆರ್ಥಿಕ ಸಬಲೀಕರಣ ನಮ್ಮ ಸರ್ಕಾರದ ಪ್ರಮುಖ ಆದ್ಯತೆಯಾಗಿದ್ದು, ಈ ಯೋಜನೆಯಡಿ ಹೊಲಿಗೆ ಯಂತ್ರಗಳ ವಿತರಣೆ ಮೂಲಕ ಅನೇಕ ಮಹಿಳೆಯರು ತಮ್ಮ ಕುಟುಂಬದ ಬಲಪಡಿಸಿಕೊಳ್ಳಲು ಆರ್ಥಿಕ ಸ್ಥಿತಿಯನ್ನು ಬಲಪಡಿಸಿಕೊಳ್ಳಲು ಹಾಗೂ ಸ್ವಂತ ಉದ್ಯಮ ಆರಂಭಿಸಲು ನೆರವಾಗಲಿದೆ ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಅವರು ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ಡಿ.ದೇವರಾಜಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಚಿತ್ರದುರ್ಗ ಇವರ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಮಹಿಳೆಯರಿಗೆ ಉಚಿತ ಹೊಲಿಗೆಯಂತ್ರಗಳನ್ನು ವಿತರಿಸಿ ಅವರು ಮಾತನಾಡಿದರು.

ಇದೇ ಸಂದರ್ಭದಲ್ಲಿ ಮಹಿಳೆಯರು ತಮ್ಮ ಪರಿಶ್ರಮ ಮತ್ತು ಸಂಕಲ್ಪದ ಮೂಲಕ ಯಶಸ್ಸು ಸಾಧಿಸಲಿ ಎಂಬುದಾಗಿ ಅವರು ಹಾರೈಸಿದರು ವಿತರಣೆ ಮಾಡಿ ಮಾತನಾಡಿದರು.ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ, ಇಲಾಖೆಯ ಅಧಿಕಾರಿಗಳು, ನಗರಸಭೆ ಸದಸ್ಯರು, ಮುಖಂಡರು ಹಾಗೂ ಫಲಾನುಭವಿಗಳು ಉಪಸ್ಥಿತರಿದ್ದರು.
