March 6, 2026
000002

ಹಿರಿಯೂರು :

ನಮ್ಮ ರೋಟರಿ ಹಾಗೂ ರೆಡ್ ಕ್ರಾಸ್ ಸಂಸ್ಥೆಗಳು ವಾರದ ಆರು ದಿನಗಳಲ್ಲೂ ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳು ಹಾಗೂ ಅವರ ಸಂಬಂಧಿಗಳ ಹಸಿವು ನೀಗಿಸುವ ಕೆಲಸ ಮಾಡುತ್ತಿದ್ದು, ಇದಕ್ಕೆ  ಕಾರಣರಾದ ರೋಟರಿ ಹಾಗೂ ರೆಡ್ ಕ್ರಾಸ್ ಸಂಸ್ಥೆಯ ದಾನಿಗಳಿಗೆ ತುಂಬು ಹೃದಯದ ಧನ್ಯವಾದಗಳು ಎಂಬುದಾಗಿ ರೆಡ್ ಕ್ರಾಸ್ ಸಂಸ್ಥೆ ಕಾರ್ಯದರ್ಶಿ ಎಂ.ಎಸ್.ರಾಘವೇಂದ್ರರವರು ಹೇಳಿದರು.

ನಗರದ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ರೋಟರಿ ಹಾಗೂ ರೆಡ್ ಕ್ರಾಸ್ ಸಂಸ್ಥೆಯ ವತಿಯಿಂದ ಆಸ್ಪತ್ರೆಗೆ ಬರುವ ರೋಗಿಗಳಿಗೆ ಉಚಿತ ಆಹಾರವನ್ನು ವಿತರಿಸಿ, ನಂತರ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ರೆಡ್ ಕ್ರಾಸ್ ಸಂಸ್ಥೆ ಕಾರ್ಯದರ್ಶಿ ಎಂ.ಎಸ್.ರಾಘವೇಂದ್ರ, ಎ.ರಾಘವೇಂದ್ರ ಸೇರಿದಂತೆ ಆಸ್ಪತ್ರೆಯ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *