
ಹಿರಿಯೂರು :
ಕಸಬಾ ಹೋಬಳಿ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದ ಜಿ.ಡಿ.ಚಿತ್ತಣ್ಣ ಇವರಿಗೆ ಹಿರಿಯೂರು ತಾಲೂಕು ಗೊಲ್ಲ ನೌಕರರ ಸಂಘದ ವತಿಯಿಂದ ಶಾಲು ಹೊದಿಸಿ, ಪುಷ್ಪಮಾಲೆ ಹಾಕಿ ಸನ್ಮಾನಿಸಿ, ಅಭಿನಂದನೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ತಾಲೂಕು ಗೊಲ್ಲ ನೌಕರರ ಸಂಘದ ಅಧ್ಯಕ್ಷರಾದ ಶಿವಾನಂದ್, ತುಮಕೂರು ವಿಶ್ವವಿದ್ಯಾಲಯ ಸಿಂಡಿಕೇಟ್ ಸದಸ್ಯರಾದ ಸಂಗೇನಹಳ್ಳಿ ತಿಪ್ಪೇಸ್ವಾಮಿ, ಮದ್ದನಕುಂಟೆನಾಗಣ್ಣ, ಮುಖಂಡರಾದ ತಿಮ್ಮಯ್ಯ, ಸೇರಿದಂತೆ ಅನೇಕ ಮುಖಂಡರುಗಳು ಉಪಸ್ಥಿತರಿದ್ದರು.
