April 17, 2026
0003

ಹಿರಿಯೂರು:

ಸಾಂಸ್ಕೃತಿಕ ಭವನವು ಲಂಬಾಣಿ ಸಮುದಾಯದ ಸಾಮಾಜಿಕ, ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಕಾರ್ಯಕ್ರಮಗಳಿಗೆ  ಮಹತ್ವದ ಕೇಂದ್ರವಾಗಲಿದೆ ಎಂಬುದಾಗಿ  ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಅವರು ಹೇಳಿದರು.

ತಾಲ್ಲೂಕಿನ ಮಾಳಗೊಂಡನಹಳ್ಳಿ  ಲಂಬಾಣಿ ತಾಂಡದಲ್ಲಿ ಸೇವಾಲಾಲ್ ಸಾಂಸ್ಕೃತಿಕ ಭವನ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ಗ್ರಾಮೀಣ ಪ್ರದೇಶದ ಜನರಿಗೆ ವಿವಿಧ ಕಾರ್ಯಕ್ರಮಗಳನ್ನು  ನಡೆಸಲು ಹಾಗೂ ಸಮುದಾಯದ ಅಭಿವೃದ್ಧಿಗೆ ಇದು ಸಹಕಾರಿಯಾಗಲಿದೆ ಎಂಬುದಾಗಿ  ಅವರು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಆರ್.ನಾಗೇಂದ್ರನಾಯ್ಕ್,  ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಈರಲಿಂಗೇಗೌಡ,  ಸ್ಥಳೀಯ ಮುಖಂಡರು, ಗ್ರಾಮಸ್ಥರು ಹಾಗೂ ಸಮುದಾಯದವರು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *