
ಹಿರಿಯೂರು:
ತಾಲ್ಲೂಕಿನ ವೇಣುಕಲ್ಲುಗುಡ್ಡ ಗ್ರಾಮದ ಸಹೃದಯಿ ಯುವಕ, ಇತ್ತೀಚೆಗೆ ಕೇಂದ್ರ ಸರ್ಕಾರದಲ್ಲಿ ಉನ್ನತ ಹುದ್ದೆ ಪಡೆದಿದ್ದ ಮತ್ತು ಊರಿನ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ರಾಘವೇಂದ್ರನಾಯಕ್ (42) ಅವರು ಗುರುವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮೃತರಿಗೆ ತಂದೆ, ತಾಯಿ,ಪತ್ನಿ, ಪುತ್ರಿ ಇದ್ದಾರೆ. ಹೈದರಾಬಾದ್ ನಲ್ಲಿ ಮುಖ್ಯ ಕಾರ್ಮಿಕ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದರು. ಗುರುವಾರ ಸಂಜೆ ವೇಣುಕಲ್ಲುಗುಡ್ಡ ಗ್ರಾಮದ ತೋಟದ ಜಮೀನಿನಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು ಎಂಬುದಾಗಿ ಕುಟುಂಬದ ಮೂಲಗಳು ಮಾಧ್ಯಮಗಳಿಗೆ ತಿಳಿಸಿದ್ದಾರೆ.
