
ಹಿರಿಯೂರು :
ಪವಿತ್ರ ರಂಜಾನ್ ತಿಂಗಳಲ್ಲಿ ಎಲ್ಲಾ ಮುಸ್ಲಿಂ ಬಾಂಧವರು ಒಂದು ತಿಂಗಳ ಕಾಲ ಶ್ರಧ್ಧೆ-ಭಕ್ತಿಯಿಂದ ಉಪವಾಸವಿದ್ದು, ಕೊನೆಯ ದಿನವಾದ ರಂಜಾನ್ ಹಬ್ಬದಂದು ಲೋಕದ ಒಳಿತಿಗಾಗಿ, ನಾಡಿನಲ್ಲಿ ಉತ್ತಮ ಮಳೆಬೆಳೆಗಾಗಿ ಪ್ರಾರ್ಥಿಸಿ, ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸುವುದು ರಂಜಾನ್ ಹಬ್ಬದ ವಿಶೇಷವಾಗಿದ್ದು, ಈ ಪವಿತ್ರ ಹಬ್ಬವಾಗಿರುವ ರಂಜಾನ್ ಹಬ್ಬವು ನಾಡಿನ ಸಮಸ್ತ ಮುಸ್ಲಿಂಬಾಂಧವರಿಗೆ ಸನ್ಮಂಗಳವನ್ನು ಉಂಟು ಮಾಡಲಿ ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಶುಭಹಾರೈಸಿದರು.
ನಗರದ ಈದ್ಗಾ ಮೈದಾನದಲ್ಲಿ ರಂಜಾನ್ ಹಬ್ಬದ ಪ್ರಯುಕ್ತ ಮುಸ್ಲೀಂ ಬಾಂಧವರ ಜೊತೆ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿ, ಸಮಸ್ತ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಾಶಯಗಳನ್ನು ಕೋರಿ ನಂತರ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ,ಮುಸ್ಲಿಂ ಧರ್ಮಗುರುಗಳು, ಮುಸ್ಲಿಂ ಮುಖಂಡರುಗಳು, ಕಾಂಗ್ರೆಸ್ ಮುಖಂಡರುಗಳು ಹಾಗೂ ಕಾರ್ಯಕರ್ತರು ಹಾಗೂ ಮುಸ್ಲಿಂ ಬಾಂಧವರು ಉಪಸ್ಥಿತರಿದ್ದರು.
