
ಹಿರಿಯೂರು :
ಇಂದಿನ ಒತ್ತಡದ ಬದುಕಿನಲ್ಲಿ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಕ್ರೀಡೆಗಳು ಅತ್ಯಂತ ಅಗತ್ಯವಾಗಿದ್ದು, ಪಂದ್ಯಾವಳಿಗಳು ಕ್ರೀಡಾಪಟುಗಳಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸುವ ಜೊತೆಗೆ ಸ್ಪರ್ಧಾತ್ಮಕ ಮನೋಭಾವವನ್ನು ಬೆಳೆಸುತ್ತದೆ ಎಂಬುದಾಗಿ ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷರಾದ ಕೆ.ಅಭಿನಂದನ್ ಹೇಳಿದರು.
ತಾಲೂಕಿನ ನಂದಿಹಳ್ಳಿ ಗ್ರಾಮದಲ್ಲಿ ಹೊಸ ವರ್ಷದ ಯುಗಾದಿ ಹಬ್ಬದ ಪ್ರಯುಕ್ತ ಆಯೋಜಿಸಲಾಗಿದ್ದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾಗವಹಿಸಿ, ಎಲ್ಲಾ ತಂಡಗಳಿಗೆ ಶುಭ ಹಾರೈಸಿ, ಮಾತನಾಡಿದರು.

ಈ ಸಂದರ್ಭದಲ್ಲಿ ಯುವ ಮುಖಂಡರಾದ ಶ್ರೀಧರ್, ಸ್ವಾಮಿನಾಥ್ ರವರು ಹಾಗೂ ಅನೇಕ ಗ್ರಾಮಸ್ಥರು, ಕಾರ್ಯಕರ್ತರು ಮತ್ತು ಕ್ರೀಡಾಭಿಮಾನಿಗಳು ಉಪಸ್ಥಿತರಿದ್ದರು.
