March 2, 2026
000002

ಹಿರಿಯೂರು:

ರಾಜ್ಯದಲ್ಲಿ ನಡೆಸಲು ಉದ್ದೇಶಿಸಿರುವ ಸಮೀಕ್ಷೆ ಕೇವಲ ಜಾತಿ ಸಮೀಕ್ಷೆಯಾಗಿರದೆ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದವರ ಕುರಿತು ಮಾಡುವ ಸಮೀಕ್ಷೆಯಾಗಿದೆ, ಸಾರ್ವಜನಿಕರು ಗೊಂದಲಕ್ಕೆ ಒಳಗಾಗದೇ ಸಮೀಕ್ಷೆಗೆ ಸರಿಯಾದ ಮಾಹಿತಿ ನೀಡಬೇಕು ಎಂಬುದಾಗಿ ನಗರಸಭೆ ಮಾಜಿ ಅಧ್ಯಕ್ಷೆ ಹಾಗೂ ಹಾಲಿ ಸದಸ್ಯೆ ಶ್ರೀಮತಿ ಶಂಷುನ್ನಿಸಾ ಅವರು  ಹೇಳಿದರು.

ನಗರದ ಮಿರ್ಜಾ ಬಡಾವಣೆಯ 8ನೇ ವಾರ್ಡಿನ  ನಗರದ ಮನೆಮನೆಗೆ ತೆರಳಿ ಸರ್ಕಾರ ನಡೆಸುತ್ತಿರುವ ಸಮೀಕ್ಷೆಯನ್ನು  ವೀಕ್ಷಣೆ ಮಾಡಿ ನಂತರ  ಅವರು ಮಾತನಾಡಿದರು.

ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯನವರ ನೇತೃತ್ವದ ನಮ್ಮ ಕಾಂಗ್ರೆಸ್ ಜನರ ಜಾತಿಯ ವಿವರ ಪಡೆಯುವ ಜೊತೆಗೆ ಅವರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸ್ಥಿತಿಗತಿಗಳ ವಿವರ ಪಡೆದು, ಅವಕಾಶ ವಂಚಿತರಿಗೆ ಸಮಾನ ಅವಕಾಶಗಳನ್ನು ನೀಡಲು ಈ ಸಮೀಕ್ಷೆಯನ್ನು ನಡೆಸಲಾಗುತ್ತಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂಬುದಾಗಿ ಅವರು ಹೇಳಿದರು.

ಈ ಸಂದರ್ಭದಲ್ಲಿ ವಾರ್ಡಿನ ನಾಗರೀಕರು ಹಾಗೂ ನಗರಸಭೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *