April 11, 2026
000007

ಹಿರಿಯೂರು :

ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಿಕ್ಷಣ ಪ್ರೇಮಿ ಸರಳ ಸಜ್ಜನಿಕೆಯ ವ್ಯಕ್ತಿತ್ವ ಉಳ್ಳವರು  ಹಾಗೂ ಶ್ರೀ ಶುಭೋದಯ ಶೈಕ್ಷಣಿಕ ಸೇವಾ ವೃದ್ದಾಶ್ರಮದ ಹಿತೈಷಿಗಳೂ, ದಾನಿಗಳು  ಆದ ಡಿ.ಸುಧಾಕರ್ ರವರ ಹುಟ್ಟುಹಬ್ಬದ ಪ್ರಯುಕ್ತ ಕಾಂಗ್ರೆಸ್ ಪಕ್ಷದ ವತಿಯಿಂದ ಆಶ್ರಮದ ನಿವಾಸಿಗಳಿಗೆ ಊಟದ ವ್ಯವಸ್ಥೆ ಮಾಡಿರುವುದು ನಿಜಕ್ಕೂ ಶ್ಲಾಘನೀಯ ಎಂಬುದಾಗಿ ಆಶ್ರಮದ ಮುಖ್ಯಸ್ಥರಾದ ತೇಜೋಮೂರ್ತಿ ಹೇಳಿದರು.

ತಾಲ್ಲೂಕಿನ ಶ್ರೀಶುಭೋದಯ ವೃದ್ಧಾಶ್ರಮದಲ್ಲಿ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಪಕ್ಷದ ವತಿಯಿಂದ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ರವರ ಹುಟ್ಟುಹಬ್ಬದ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ “ಅನ್ನಸಂತರ್ಪಣೆ” ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಶ್ರೀಯುತರ ಸೇವಾಮನೋಭಾವಕ್ಕೆ ಶ್ರೀ ಆಶ್ರಮ ಸಮಿತಿ ವತಿಯಿಂದ ಅವರಿಗೆ ಹಾಗೂ ಅವರ ಕುಟುಂಬವರ್ಗಕ್ಕೆ ದೈವಾನುಗ್ರಹ ಪ್ರಾಪ್ತಿಯಾಗಲೆಂದು ಪ್ರಾರ್ಥಿಸುತ್ತಾ, ಆಶ್ರಮದ ನಿವಾಸಿಗಳ ಪರವಾಗಿ ತುಂಬು ಹೃದಯದ ಧನ್ಯವಾದಗಳನ್ನು ಅರ್ಪಿಸಿದರು.

ಈ ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಖಾದಿರಮೇಶ್ ಹಾಗೂ ಉಪಾಧ್ಯಕ್ಷರಾದ ಜ್ಞಾನೇಶ್. ಶಿವಕುಮಾರ್, ಮಮತಾ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *