
ಹಿರಿಯೂರು :
ತಾಲ್ಲೂಕಿನಲ್ಲಿ ಕಾಂಗ್ರೆಸ್ ಪಕ್ಷವನ್ನು ಯಶಸ್ವಿಯಾಗಿ ಸಂಘಟಿಸುವ ಮೂಲಕ ಚುನಾವಣೆಯಲ್ಲಿ ಜಯಭೇರಿ ಬಾರಿಸಿ, ತಾಲ್ಲೂಕಿನ ಜನರೊಂದಿಗೆ ನಿರಂತರ ಅವಿನಾಭಾವ ಸಂಬಂಧ ಹೊಂದಿರುವ ಇವರು ಕ್ಷೇತ್ರದ ಶಾಸಕರಾಗಿ, ಸಚಿವರಾಗಿ ತಾಲ್ಲೂಕಿನ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಜನಮೆಚ್ಚುಗೆ ಪಡೆದಿದ್ದು ಹಾಗು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷರು ಆಗಿರುವ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ರವರಿಗೆ “ಹಿರಿಯೂರು ನ್ಯೂಸ್” ತಂಡದ ವತಿಯಿಂದ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರಲಾಗಿದೆ.
ಅವರ ಈ ಹುಟ್ಟುಹಬ್ಬದ ಸಂದರ್ಭದಲ್ಲಿ ನಮ್ಮ ಅತ್ಯಂತ ಪ್ರೀತಿಪಾತ್ರರು ಹಾಗೂ ಆತ್ಮೀಯರಾದ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ರವರಿಗೆ ಮತ್ತು ಅವರ ಕುಟುಂಬ ವರ್ಗದವರಿಗೆ ಆ ಭಗವಂತ ಆರೋಗ್ಯ, ಆಯಸ್ಸು, ಯಶಸ್ವಿನ ಜೊತೆಗೆ ಜೀವನದಲ್ಲಿ ಸುಖಶಾಂತಿ ನೆಮ್ಮದಿಯನ್ನು ಕೊಟ್ಟು ಕಾಪಾಡಲಿ ಎಂಬುದಾಗಿ “ಹಿರಿಯೂರು ನ್ಯೂಸ್” ತಂಡದ ವತಿಯಿಂದ ಪತ್ರಕರ್ತರುಗಳಾದ ಆಲೂರು ಹನುಮಂತರಾಯಪ್ಪ, ಹಾಗೂ ಪಿ.ಆರ್.ಸತೀಶ್ ಬಾಬು, ಗೋಸಿಕೆರೆ ರಂಗನಾಥ್, ಕೇಶವಮೂರ್ತಿ, ಶ್ರೀಪಾದ್ ವಸಿಷ್ಠ, ಶಿವರಾಜ್, ಜಗದೀಶ್, ಪರಮೇಶ್ವರಪ್ಪ, ಇರ್ಪಾನ್ ವುಲ್ಲಾ, ಹಿದಾಯತ್ ವುಲ್ಲಾ, ವೆಂಕಟೇಶ್ ಇವರುಗಳು ಶುಭಹಾರೈಸಿದ್ದಾರೆ.
