April 11, 2026
006

ಹಿರಿಯೂರು :    

ಮಾತೃಶ್ರೀ ಹೇಮಾವತಿ ಅಮ್ಮನವರ ಹುಟ್ಟುಹಬ್ಬದ ಪ್ರಯುಕ್ತ ವಾತ್ಸಲ್ಯ ಸದಸ್ಯರಿಗೆ ಹಣ್ಣು ಹಂಪಲುಗಳನ್ನು ವಿತರಿಸುವ ಮೂಲಕ ಮಾತೃಶ್ರೀ ಹೇಮಾವತಿ ಅಮ್ಮನವರಿಗೆ ಭಗವಂತನು ಆರೋಗ್ಯ, ಆಯಸ್ಸು ಕೊಟ್ಟು ಕಾಪಾಡಲಿ ಎಂದು ಹಾರೈಸಲಾಗುತ್ತಿದೆ ಎಂಬುದಾಗಿ ಮಾನ್ಯ ಜಿಲ್ಲಾ ನಿರ್ದೇಶಕರಾದ ವಿನಯ್ ಕುಮಾರ್ ಸುವರ್ಣ ಹೇಳಿದರು.

ತಾಲ್ಲೂಕಿನ ವಿವಿಪುರ ತಾಲೂಕು ವಾತ್ಸಲ್ಯ ಸದಸ್ಯರಾದ ಅಂಬುಜಾಕ್ಷಿ ಅವರಿಗೆ ಮಾತೃಶ್ರೀ ಹೇಮಾವತಿ ಅಮ್ಮನವರ ಹುಟ್ಟುಹಬ್ಬದ ಪ್ರಯುಕ್ತ ಹಣ್ಣು-ಹಂಪಲು ವಿತರಿಸಿ, ನಂತರ ಅವರು ಮಾತನಾಡಿದರು.

ಇದೇ ಸಂದರ್ಭದಲ್ಲಿ  ತಾಲೂಕಿನಲ್ಲಿ 80 ವಾತ್ಸಲ್ಯ ಸದಸ್ಯರಿಗೆಮಾತೃಶ್ರೀ ಹೇಮಾವತಿ ಅಮ್ಮನವರ ಹುಟ್ಟುಹಬ್ಬದ ಪ್ರಯುಕ್ತ ಹಣ್ಣು ಹಂಪಲುಗಳನ್ನು ವಿತರಿಸಲಾಯಿತು, ಈ ಸಂದರ್ಭದಲ್ಲಿ ತಾಲೂಕಿನ ಯೋಜನಾಧಿಕಾರಿಗಳಾದ ಆರ್.ಅನಿಲ್, ಹಾಗೂ ಕೃಷ್ಣ ದೇವಸ್ಥಾನದ ಅಧ್ಯಕ್ಷರಾದ ಧರಣೇಶ್,  ಜ್ಞಾನ ವಿಕಾಸ ಸಮನ್ವಯ ಅಧಿಕಾರಿ ಅನಿತಾ ಸೇರಿದಂತೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *