
ಹಿರಿಯೂರು :
ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರ ಹೋರಾಟ, ತತ್ವ, ಆದರ್ಶಗಳು ಹಾಗೂ ವಿಚಾರಧಾರೆಗಳನ್ನು ಇಂದಿಗೂ ಪ್ರಸ್ತುತವಾಗಿದ್ದು, ಇಂದಿನ ಯುವಜನತೆ ಡಾ.ಅಂಬೇಡ್ಕರ್ ರವರ ವಿಚಾರಧಾರೆಗಳನ್ನು ಗೌರವಿಸುವ ಮೂಲಕ ದೇಶದಲ್ಲಿ ಸರ್ವಜನಾಂಗದ ಸಮಾನತೆಯನ್ನು ಕಾಪಾಡಬೇಕು ಎಂಬುದಾಗಿ ತಾಲೂಕು ದಂಡಾಧಿಕಾರಿಗಳಾದ ಸಿದ್ದೇಶ್ ಹೇಳಿದರು.

ನಗರದ ನಗರಸಭೆ ಕಛೇರಿಯ ಕೌನ್ಸಿಲ್ ಸಭಾಂಗಣದಲ್ಲಿ ಭಾರತರತ್ನ, ಸಂವಿಧಾನ ಶಿಲ್ಪಿ ಡಾ||ಬಿ.ಆರ್.ಅಂಬೇಡ್ಕರ್ ಜಯಂತಿ ಹಾಗೂ ಡಾ||ಬಾಬುಜಗಜೀವನ್ ರಾo ರವರ 119ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಇದೇ ಸಂದರ್ಭದಲ್ಲಿ ಹಿರಿಯೂರು ನಗರದ ಟಿ.ಬಿ.ಸರ್ಕಲ್ ನಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. ಹಾಗೂ ಸರ್ಕಾರಿ ಆಸ್ಪತ್ರೆಯ ಬಳಿ ಇರುವ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಜಯಂತಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಯಿತು.
ಈ ಕಾರ್ಯಕ್ರಮದಲ್ಲಿ ತಾಲೂಕು ದಂಡಾಧಿಕಾರಿಗಳಾದ ಸಿದ್ದೇಶ್, ಹಾಗೂ ಪೌರಾಯುಕ್ತರಾದ ಎ.ವಾಸೀಂ ಮತ್ತು ನಗರಸಭೆ ಕಚೇರಿಯ ಸಿಬ್ಬಂದಿಗಳು ಕಛೇರಿಯ ನೌಕರರು, ಸಿಬ್ಬಂದಿ ವರ್ಗದವರು ಹಾಗೂ ಹಿರಿಯ ಕಿರಿಯ ಆರೋಗ್ಯ ನಿರೀಕ್ಷಕರುಗಳು ದಪೇದಾರರುಗಳು ಮತ್ತು ಪೌರಕಾರ್ಮಿಕರು ಹಾಗೂ ನೀರುಸರಬರಾಜು ಸಿಬ್ಬಂದಿಗಳು ಪಾಲ್ಗೊಂಡಿದ್ದರು.
