April 16, 2026
003

ಹಿರಿಯೂರು :

ಡಾ.ಬಿ.ಆರ್.ಅಂಬೇಡ್ಕರ್ ರವರು ರಚಿಸಿರುವ ಸಂವಿಧಾನವು ಶೋಷಿತರು, ಹಿಂದುಳಿದವರು, ದಲಿತ ಸಮುದಾಯಗಳನ್ನು ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಪ್ರಮುಖಪಾತ್ರವನ್ನು ವಹಿಸುತ್ತದೆ, ಸಮಾಜದಲ್ಲಿ ಹಿಂದುಳಿದವರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸಿದ ಡಾ.ಬಿ.ಆರ್.ಅಂಬೇಡ್ಕರ್ ರವರ ತತ್ವ-ಆದರ್ಶಗಳನ್ನು ನಾವೆಲ್ಲರೂ ಅಳವಡಿಸಿಕೊಳ್ಳಬೇಕು ಎಂಬುದಾಗಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಪಿ.ಎಸ್.ಸಾದುತ್ ಉಲ್ಲ ಅಬ್ದುಲ್ ಅಜಿತ್ ಹೇಳಿದರು.

ನಗರದ ಆಸ್ಪತ್ರೆ ಸರ್ಕಲ್ ಬಳಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರ ಜಯಂತಿ ಅಂಗವಾಗಿ ಡಾ.ಬಿ.ಆರ್.ಅಂಬೇಡ್ಕರ್ ರವರ ಪ್ರತಿಮೆಗೆ ಪುಷ್ಪ ಮಾಲಾರ್ಪಣೆ ಮಾಡಿ, ನಂತರ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಮುಖಂಡರಾದ ಅಬ್ದುಲ್ ನಬಿ, ಮೊಹಮ್ಮದ್ ಸೈಫ್ ಉಲ್ಲ, ಅಭಿದ್ ಹುಸೇನ್, ಜಿ.ದಾದಾಪೀರ್ ಸೇರಿದಂತೆ ಹಲವಾರು ಮುಖಂಡರು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *