April 16, 2026
3c6f42cf-5ab8-4bc2-b34b-28a5e08f120f

ಹಿರಿಯೂರು :      

ಭಾರತೀಯ ಜನತಾ ಪಾರ್ಟಿ ಹಿರಿಯೂರು ಮಂಡಲದ ವತಿಯಿಂದ ಪಕ್ಷ ಸಂಘಟನೆ ಬಲಪಡಿಸುವ ನಿಟ್ಟಿನಲ್ಲಿ ಅಬ್ಬಿನಹೊಳೆ ಗ್ರಾಮ ಪಂಚಾಯಿತಿ ವಿವಿಧ ಗ್ರಾಮಗಳಲ್ಲಿ ಕಾರ್ಯಕರ್ತರ ಬೂತ್ ಮಟ್ಟದ ಸಭೆಗಳನ್ನು ನಡೆಸಲಾಯಿತು.

ಈ ಸಭೆಗಳಲ್ಲಿ ಬಿಜೆಪಿ ಮಂಡಲ ಅಧ್ಯಕ್ಷರಾದ ಕೆ.ಅಭಿನಂದನ್ ನೇತೃತ್ವದಲ್ಲಿ ನಡೆದ ಭೂತ್ ಮಟ್ಟದಲ್ಲಿ ಪಕ್ಷವನ್ನು ಇನ್ನಷ್ಟು ಗಟ್ಟಿಗೊಳಿಸುವುದು ಸೇರಿದಂತೆ ಬಿಜೆಪಿ ಪಕ್ಷಕ್ಕೆ ಹೊಸ ಸದಸ್ಯರನ್ನು ಸೇರ್ಪಡೆ ಮಾಡುವುದು ಹಾಗೂ ಸಂಘಟನೆಯ ವ್ಯಾಪ್ತಿಯನ್ನು ವಿಸ್ತರಿಸುವ ಕುರಿತು ಮಹತ್ವದ ಚರ್ಚೆಗಳು ನಡೆದವು.

ಕಾರ್ಯಕರ್ತರಿಗೆ ತಮ್ಮ ಬೂತ್ ಗಳಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುವುದು ಮತದಾರರೊಂದಿಗೆ ನಿಕಟ ಸಂಪರ್ಕ ಬೆಳೆಸುವುದು ಹಾಗೂ ಕೇಂದ್ರ ಸರ್ಕಾರದ ಜನಪರ ಯೋಜನೆಗಳನ್ನು ಮನೆಮನೆಗೆ ತಲುಪಿಸುವ ಬಗ್ಗೆ ತಿಳಿಸಲಾಯಿತು.

ಈ ಸಭೆಯಲ್ಲಿ ಪಕ್ಷದ ಮುಖಂಡರು ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಸಂಕಲ್ಪ ವ್ಯಕ್ತಪಡಿಸಿದರು.

About The Author

Leave a Reply

Your email address will not be published. Required fields are marked *