April 21, 2026
000002

ಹಿರಿಯೂರು :

ಸನಾತನ ಹಿಂದೂ ಧರ್ಮವನ್ನು ಪುನಶ್ಚೇತನಗೊಳಿಸಿದ ಅಧ್ವೈತ ಸಿದ್ಧಾಂತದ ಪ್ರತಿಪಾದಕರಾದ ಆದಿಶಂಕರಾಚಾರ್ಯರ ಜಯಂತಿಯನ್ನು ವೈಶಾಖ ಮಾಸದ ಶುಕ್ಲಪಕ್ಷದ ಪಂಚಮಿ ತಿಥಿಯಂದು ಆಚರಿಸಲಾಗುತ್ತಿದ್ದು, ಇದು ಅವರ 1238ನೇ ಜನ್ಮದಿನೋತ್ಸವವಾಗಿದೆ ಎಂಬುದಾಗಿ ತಾಲ್ಲೂಕು ತಹಶೀಲ್ದಾರರಾದ ಎಂ.ಸಿದ್ದೇಶ್ ಹೇಳಿದರು.

ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ತಾಲೂಕು ಆಡಳಿತ ಮತ್ತು ತಾಲೂಕು ಪಂಚಾಯಿತಿ, ನಗರಸಭೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಆದಿಗುರು ಶಂಕರಾಚಾರ್ಯರ ಜಯಂತೋತ್ಸವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ಅವರು ಮಾತನಾಡಿದರು.

ಸನಾತನ ಭಾರತದ ಸಂಸ್ಕೃತಿಯನ್ನು ಜಗತ್ತಿಗೆ ಸಾರಿ ಹೇಳಿದ ಆಚಾರ್ಯತ್ರಯರಲ್ಲಿ ಶಂಕರಾಚಾರ್ಯರು ಮೊದಲಿಗರು, ಆದಿಶಂಕರರು ಕೇವಲ 32 ವರ್ಷಗಳ ಕಾಲ ಜೀವಿಸಿದ್ದರೂ ಸಹ ಈ ಅಲ್ಪಾವಧಿಯಲ್ಲಿಯೇ ದೇಶದ ಮೂಲೆಮೂಲೆಗಳಿಗೆ ಸಂಚರಿಸಿ, ವೇದಗಳ ಜ್ಞಾನವನ್ನು ಪಸರಿಸಲು ಅವರು ದೇಶದ ನಾಲ್ಕು ದಿಕ್ಕುಗಳಲ್ಲಿ ನಾಲ್ಕು ಮಠಗಳನ್ನು ಸ್ಥಾಪಿಸಿದರು ಎಂದರು.

ಈ ಕಾರ್ಯಕ್ರಮದಲ್ಲಿ ಬ್ರಾಹ್ಮಣ ಸಮಾಜದ ಅಧ್ಯಕ್ಷರಾದ ಎಂ.ಎಸ್.ಸ್ವಾಮಿನಾಥನ್, ಕಾರ್ಯದರ್ಶಿ ವೆಂಕಟೇಶ್ ದೀಕ್ಷಿತ್, ಉಪಾಧ್ಯಕ್ಷರುಗಳಾದ ಡಿ.ಕೆ.ನರಸಿಂಹಮೂರ್ತಿ, ಪಿ.ಪ್ರಶಾಂತ್, ಸದಸ್ಯರುಗಳಾದ ಚಂದ್ರಶೇಖರ್, ಸಂತೋಷ್ ಕುಮಾರ್, ಟಿ.ಎಸ್.ಗುರುರಾಜ್, ಎಸ್.ವಿ.ಶ್ರೀನಿವಾಸರಾವ್, ಚೈತನ್ಯ ವಿಪ್ರ ಮಹಿಳಾ ಮಂಡಳಿ ಅಧ್ಯಕ್ಷರಾದ ಎಸ್.ಬಿ.ಶಾರದಮ್ಮ, ಕೃಷ್ಣಕುಮಾರಿ, ಚೈತನ್ಯ ವಿಪ್ರ ಮಹಿಳಾ ಮಂಡಳಿ ಕಾರ್ಯದರ್ಶಿಗಳು, ಸದಸ್ಯರು ಹಾಗೂ ಕರ್ನಾಟಕ ಜಲ ಮಂಡಳಿ ಚಂದ್ರಶೇಖರ್, ತಾಲೂಕು ಕಚೇರಿ ಶ್ರೀನಿವಾಸ್ ರೆಡ್ಡಿ, ನರಸಿಂಮೂರ್ತಿ, ಎಸ್.ಎನ್.ಮಂಜುನಾಥ್ ಸೇರಿದಂತೆ ಕಚೇರಿ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *