April 21, 2026
004

ಹಿರಿಯೂರು :                                                          

ಬೇಸಿಗೆಯ ಬಿರುಬಿಸಿಲಿನಲ್ಲಿ ಆಸ್ಪತ್ರೆಗೆ ಬರುವ ರೋಗಿಗಳು ಹಾಗೂ ಅವರ ಸಂಬಂಧಿಗಳಿಗೆ ರೋಟರಿ ಹಾಗೂ ರೆಡ್ ಕ್ರಾಸ್ ಸಂಸ್ಥೆಯಿಂದ ಉಚಿತ ಊಟದ ವ್ಯವಸ್ಥೆ ಮಾಡಲಾಗಿದ್ದು, ಆಸ್ಪತ್ರೆಗೆ ಬರುವ ರೋಗಿಗಳು ಇದನ್ನು ಸದ್ಭಳಕೆ ಮಾಡಿಕೊಳ್ಳಬೇಕು ಎಂಬುದಾಗಿ ರೆಡ್ ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಎಂ.ಎಸ್. ರಾಘವೇಂದ್ರ ಹೇಳಿದರು.

ನಗರದ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ರೋಟರಿ ಹಾಗೂ ರೆಡ್ ಕ್ರಾಸ್ ಸಂಸ್ಥೆಯಿಂದ ವಾರದ 6 ದಿನಗಳು ಉಚಿತ ಆಹಾರ ವ್ಯವಸ್ಥೆಯನ್ನು ಮಾಡಿ, ಸಾರ್ವಜನಿಕರಿಗೆ ಆಹಾರವಿತರಿಸಿ, ನಂತರ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಸಾರ್ವಜನಿಕರು ಹಾಗೂ ಆಸ್ಪತ್ರೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *