April 23, 2026
02

ಹಿರಿಯೂರು :

ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ, ಕಾಂಗ್ರೆಸ್ ಪಕ್ಷ ಏನೋ ಮಾಡಬಾರದನ್ನು ಮಾಡಿ, ಮಹಿಳೆಯರಿಗೆ ಮೋಸ ಮಾಡಿದೆ ಎಂಬುದಾಗಿ ಆರೋಪ ಮಾಡುತ್ತಿದ್ದಾರೆ,  ಇದು ನಿಜಕ್ಕೂ ಖಂಡನೀಯ ಕರ್ನಾಟಕ ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಿವರಂಜಿನಿಯಾದವ್ ಆಗ್ರಹಿಸಿದ್ದಾರೆ.

ನಗರದಲ್ಲಿ ಮಹಿಳಾ ಕಾರ್ಯಕರ್ತರೊಂದಿಗೆ ಬಿಜೆಪಿ ದುರಾಡಳಿತದ ವಿರುದ್ಧ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಕಳೆದ 2023ರಲ್ಲಿ ಸರ್ವಾನುಮತದಿಂದ ಬಿಜೆಪಿ ಕಾಂಗ್ರೆಸ್ ಎಲ್ಲಾ ಪಕ್ಷ ಒಂದಾಗಿ 33% ಮಹಿಳಾ ಮೀಸಲಾತಿಗೆ ಅನುಮೋದನೆ ನೀಡಿ ಎರಡೂವರೆ ವರ್ಷ ಕಳೆದರೂ ಇಲ್ಲಿವರೆಗೂ ಅದನ್ನು ಜಾರಿಗೆ ತರಲು ಪ್ರಯತ್ನಪಟ್ಟಿಲ್ಲ, ಸಂವಿಧಾನದ ಅಡಿಯಲ್ಲಿ 2023ರಲ್ಲಿ ಅನುಮೋದನೆಯಾಗಿರುವ ಮಹಿಳೆಯರಿಗೆ 33 ಪರ್ಸೆಂಟ್ ಮೀಸಲಾತಿ ಈ ಕೂಡಲೇ ಜಾರಿಗೊಳಿಸುವ ಮೂಲಕ ನಮ್ಮ ಮಹಿಳೆಯರಿಗೆ ನ್ಯಾಯ ಒದಗಿಸಬೇಕು ಎಂಬುದಾಗಿ ಒತ್ತಾಯಿಸಿದರು.

ಈ ಪ್ರತಿಭಟನೆಗೆ ಮಹಿಳಾ ಕಾರ್ಯಕರ್ತರು ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಪ್ರತಿಭಟನೆಯನ್ನು ಯಶಸ್ವಿಗೊಳಿಸಲಾಯಿತು.

About The Author

Leave a Reply

Your email address will not be published. Required fields are marked *