April 24, 2026
0001

ಬೆಂಗಳೂರು:

ಶ್ವಾಸಕೋಶದ ಸೋಂಕಿನಿಂದಾಗಿ ಸಚಿವರಾದ ಡಿ.ಸುಧಾಕರ್ ಅವರು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಈ ಬಗ್ಗೆ ಮಾಹಿತಿ ನೀಡಿರುವ ಡಾ.ಮಂಜುನಾಥ್ ಮತ್ತು ಆಸ್ಪತ್ರೆಯ ವೈದ್ಯಕೀಯ ತಂಡವು, “ಸಚಿವರು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ” ಎಂಬುದಾಗಿ ತಿಳಿಸಿದ್ದಾರೆ.

​ಸಚಿವರಾದ ಡಿ.ಸುಧಾಕರ್ ರವರ ಆರೋಗ್ಯದ ಬಗ್ಗೆ ಆಸ್ಪತ್ರೆಯ ನಿರ್ದೇಶಕರಾದ ಡಾ.ಚಿನ್ನದೊರೈ ಅವರು ಅಧಿಕೃತ ವೈದ್ಯಕೀಯ ಬುಲೆಟಿನ್ ಬಿಡುಗಡೆ ಮಾಡಿದ್ದು, ಸಾರ್ವಜನಿಕರು ಯಾವುದೇ ಸುಳ್ಳು ವದಂತಿಗಳಿಗೆ ಕಿವಿಗೊಡಬಾರದು ಎಂಬುದಾಗಿ ಸಚಿವರಾದ ಡಿ.ಸುಧಾಕರ್ ರವರ ಕುಟುಂಬಸ್ಥರು ಸಾರ್ವಜನಿಕರಲ್ಲಿ ವಿನಂತಿಸಿದ್ದಾರೆ. ​

About The Author

Leave a Reply

Your email address will not be published. Required fields are marked *