
ಬೆಂಗಳೂರು:
ಅನಾರೋಗ್ಯದ ಹಿನ್ನೆಲೆಯಲ್ಲಿ ಎಲೆಕ್ಟ್ರಾನಿಕ್ಸ್ ಸಿಟಿಯ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿರುವ ಸಚಿವರಾದ ಡಿ.ಸುಧಾಕರ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಭೇಟಿ ಮಾಡಿ, ಸಚಿವರಾದ ಡಿ.ಸುಧಾಕರ್ ರವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡರು. ಈ ವೇಳೆ ಡಿ.ಸುಧಾಕರ್ ಅವರ ಕುಟುಂಬ ಸದಸ್ಯರನ್ನು ಭೇಟಿ ಮಾಡಿ ಅವರುಗಳಿಗೆ ಧೈರ್ಯ ತುಂಬಿದರು.

ಆಸ್ಪತ್ರೆಯ ವೈದ್ಯರಿಂದ ಸಚಿವರ ಆರೋಗ್ಯ ಸ್ಥಿತಿಯ ಕುರಿತು ವಿವರವಾದ ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿಗಳು, ಶೀಘ್ರ ಗುಣಮುಖರಾಗಲು ಅಗತ್ಯವಿರುವ ಎಲ್ಲಾ ಉನ್ನತ ಮಟ್ಟದ ವೈದ್ಯಕೀಯ ಚಿಕಿತ್ಸೆಗಳನ್ನು ನೀಡುವಂತೆ ವೈದ್ಯಕೀಯ ತಂಡಕ್ಕೆ ಸೂಚನೆ ನೀಡಿದರಲ್ಲದೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು ಸುಧಾಕರ್ ರವರಿಗೆ ಪ್ರಜ್ಞೆ ಬಂದ ನಂತರ ಚಿಕಿತ್ಸೆ ಮುಂದುವರೆಸುವುದಾಗಿ ಹೇಳಿದರು.

ಮುಖ್ಯಮಂತ್ರಿ ಸಿದ್ಧರಾಮಯ್ಯರವರ ಜೊತೆಗೆ ಸಚಿವರಾದ ಜಮೀರ್ ಅಹಮದ್ ಖಾನ್ ಕೂಡ ಆಸ್ಪತ್ರೆಗೆ ಆಗಮಿಸಿ ಸಚಿವರಾದ ಡಿ.ಸುಧಾಕರ್ ರವರ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದರಲ್ಲದೆ, ಸದ್ಯ ಡಿ.ಸುಧಾಕರ್ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂಬುದಾಗಿ ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡರು.
