April 30, 2026
001

ಬೆಂಗಳೂರು :

ಹಿರಿಯೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಡಿ.ಸುಧಾಕರ್ ಅವರು ಚಿಕಿತ್ಸೆ ಪಡೆಯುತ್ತಿರುವ ಕಿಮ್ಸ್ ಆಸ್ಪತ್ರೆಗೆ ಕರ್ನಾಟಕ ರಾಜ್ಯ ಆದಿ ಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಜಿ.ಎಸ್.ಮಂಜುನಾಥ್ ಅವರು ಭೇಟಿ ನೀಡಿ,  ಸಚಿವರಾದ ಡಿ.ಸುಧಾಕರ್ ರವರ ಆರೋಗ್ಯದ ಕುರಿತು ಮಾಹಿತಿಯನ್ನು ಪಡೆದುಕೊಂಡರು.

ಕಳೆದ ಕೆಲವು ದಿನಗಳಿಂದ ಅನಾರೋಗ್ಯಕ್ಕೊಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಸಚಿವರನ್ನು ಭೇಟಿ ಮಾಡಿದ ಮಂಜುನಾಥ್ ಅವರು ಸಚಿವರಾದ ಡಿ.ಸುಧಾಕರ್ ಅವರು ಜನಾನುರಾಗಿ ನಾಯಕರು ಅವರು ಆದಷ್ಟು ಬೇಗ ಗುಣಮುಖರಾಗಿ ಮತ್ತೆ ಎಂದಿನಂತೆ ಜನಸೇವೆಯಲ್ಲಿ ತೊಡಗಿಕೊಳ್ಳಲಿದ್ದಾರೆ ಅವರ ಅಭಿಮಾನಿಗಳು ಮತ್ತು ಕಾರ್ಯಕರ್ತರು ಆತಂಕ ಪಡುವ ಅಗತ್ಯವಿಲ್ಲ ಎಂಬುದಾಗಿ ವಿಶ್ವಾಸ ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ ಸಚಿವರ ಕುಟುಂಬ ಸದಸ್ಯರೊಂದಿಗೆ ಮಾತುಕತೆ ನಡೆಸಿದ ಅವರು ಕುಟುಂಬಸ್ಥರಿಗೆ ಧೈರ್ಯ ತುಂಬುವ ಕೆಲಸ ಮಾಡಿದರು, ಸಚಿವರ ಭೇಟಿ ಸಂದರ್ಭದಲ್ಲಿ ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಸುಧಾಕರ್ ಅವರ ಕುಟುಂಬ ಸದಸ್ಯರು, ಸೇರಿದಂತೆ ಸ್ಥಳೀಯ ನಾಯಕರು ಹಾಗೂ ಅಭಿಮಾನಿಗಳು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *