June 1, 2026
003

ಹಿರಿಯೂರು :

ನಗರದ ಹೆಸರಾಂತ ಮೂಳೆರೋಗ ತಜ್ಞರು ಹಾಗೂ ವೇದಾಬ್ಯಾಂಕ್ ಅಧ್ಯಕ್ಷರಾದ ಡಾ.ಶ್ರೀಪತಿರವರು ಬುಧವಾರ ಬೆಳಗಿನ ಜಾವ ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ, ಮಧ್ಯಾಹ್ನ 3 ಗಂಟೆಗೆ ಮಾರಿಕಣಿವೆಯಲ್ಲಿರುವ ಅವರ ತೋಟದಲ್ಲಿ ನೆರವೇರಿಸಲಾಯಿತು ಎಂಬುದಾಗಿ ಕುಟುಂಬದ ಮೂಲಗಳು ತಿಳಿಸಿವೆ, ವೈದ್ಯರಾದ ಡಾ.ಶ್ರೀಪತಿರವರ ನಿಧನಕ್ಕೆ  “ಹಿರಿಯೂರುನ್ಯೂಸ್” ತಂಡದ ವತಿಯಿಂದ ಭಾವಪೂರ್ಣಶ್ರದ್ಧಾಂಜಲಿ ಅರ್ಪಿಸಲಾಗಿದೆ.

ಮೂಳೆರೋಗ ತಜ್ಞರಾದ ಡಾ.ಶ್ರೀಪತಿರವರ ನಿಧನದ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗದವರಿಗೆ ಆ ಭಗವಂತನು ದಯಪಾಲಿಸಲಿ ಎಂಬುದಾಗಿ “ಹಿರಿಯೂರು ನ್ಯೂಸ್” ತಂಡದ ಮುಖ್ಯಸ್ಥರು, ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷರು ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ಆಲೂರುಹನುಮಂತರಾಯಪ್ಪರವರು ಹಾಗೂ ಹಿರಿಯ ಪತ್ರಕರ್ತರುಗಳಾದ ಪಿ.ಆರ್.ಸತೀಶ್ ಬಾಬು, ಗೋಸಿಕೆರೆ ರಂಗನಾಥ್ ಕೇಶವಮೂರ್ತಿ, ಶ್ರೀಪಾದ್ ವಸಿಷ್ಠ, ಶಿವರಾಜ್ ನಾಯಕ್, ಉಮೇಶ್, ಯಾದವ್, ಪರಮೇಶ್ವರಪ್ಪ, ಇರ್ಫಾನ್ ವುಲ್ಲಾ, ಹಿದಾಯತ್ ವುಲ್ಲಾ ಇವರುಗಳು ಸಂತಾಪ ಸೂಚಿಸಿದ್ದಾರೆ.

About The Author

Leave a Reply

Your email address will not be published. Required fields are marked *