May 31, 2026
000000006

ಹಿರಿಯೂರು:

ನಗರದ ಕಾಂಗ್ರೆಸ್ ಪಕ್ಷದ ಕಚೇರಿಗೆ ಮಾಜಿ ಸಚಿವರಾದ ದಿವಂಗತ ಡಿ.ಸುಧಾಕರ್ ಅವರ ಪುತ್ರ ಸುಹಾಸ್ ಸುಧಾಕರ್ ಹಾಗೂ ಅವರ ಅಳಿಯ ನಿತೀಶ್ ಅವರು ಇಂದು ಭೇಟಿ ನೀಡಿ, ಡಿ.ಸುಧಾಕರ್ ರವರ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದರು, ಈ ಸಂದರ್ಭದಲ್ಲಿ ಸಚಿವರಾದ ಡಿ.ಸುಧಾಕರ್ ರವರ ಅತ್ಯಂತ ನಿಕಟವರ್ತಿಗಳು ಹಾಗೂ ಚಿತ್ರದುರ್ಗ ಶಾಸಕರಾದ ವೀರೇಂದ್ರಪಪ್ಪಿ ಉಪಸ್ಥಿತರಿದ್ದರು.

​ಕಚೇರಿಗೆ ಆಗಮಿಸಿದ ಈ ಯುವ ಮುಖಂಡರುಗಳು, ಸ್ಥಳೀಯ ಮುಖಂಡರು ಹಾಗೂ ಪಕ್ಷದ ಅಭಿಮಾನಿಗಳು ಹಾಗೂ ಕಾರ್ಯಕರ್ತರೊಂದಿಗೆ ಕೆಲವು ಗಂಟೆಗಳ ಕಾಲ ಸುದೀರ್ಘವಾಗಿ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಕ್ಷೇತ್ರದ ಪ್ರಸ್ತುತ ರಾಜಕೀಯ ವಿದ್ಯಮಾನಗಳು ಹಾಗೂ ಪಕ್ಷದ ಸಂಘಟನೆಯ ಕುರಿತು ಕಾರ್ಯಕರ್ತರೊಂದಿಗೆ ಆಪ್ತ ಸಮಾಲೋಚನೆ ನಡೆಸಲಾಯಿತು.

​ದಿವಂಗತ ಡಿ.ಸುಧಾಕರ್ ಅವರ ನಿಧನದ ನಂತರ ಕ್ಷೇತ್ರದಲ್ಲಿ ಆಗಿರುವ ರಾಜಕೀಯ ಸ್ಥಿತ್ಯಂತರಗಳ ಮಧ್ಯೆ, ಅವರ ಕುಟುಂಬದ ಯುವ ನಾಯಕರು ಒಟ್ಟಾಗಿ ಪಕ್ಷದ ಕಚೇರಿಗೆ ಭೇಟಿ ನೀಡಿರುವುದು ಸ್ಥಳೀಯ ಕಾಂಗ್ರೆಸ್ ವಲಯದಲ್ಲಿ ಹೊಸ ರಾಜಕೀಯ ಬೆಳವಣಿಗೆಗೆ ಕಾರಣವಾಗಿದೆ. ಈ ಭೇಟಿಯು ಕ್ಷೇತ್ರದಲ್ಲಿ ಮುಂಬರುವ ದಿನಗಳಲ್ಲಿ ಹೊಸ ಸಂಚಲನ ಮೂಡಿಸುವ ಮುನ್ಸೂಚನೆ ನೀಡಿದ್ದು, ಕಾರ್ಯಕರ್ತರಲ್ಲಿ ಉತ್ಸಾಹವನ್ನು ಹೆಚ್ಚಿಸಿದೆ.

​ಸ್ಥಳೀಯ ರಾಜಕಾರಣದ ದೃಷ್ಟಿಯಿಂದ ಈ ಭೇಟಿ ಅತ್ಯಂತ ಮಹತ್ವದ್ದಾಗಿದ್ದು, ಮುಂದಿನ ನಡೆ ಏನಿರಬಹುದು ಎಂಬ ಕುರಿತು ಸಾರ್ವಜನಿಕ ವಲಯದಲ್ಲಿ ಚರ್ಚೆಗಳು ಆರಂಭವಾಗಿವೆ.

About The Author

Leave a Reply

Your email address will not be published. Required fields are marked *