

ಹಿರಿಯೂರು:
ದೇಶದ ಪ್ರಧಾನಮಂತ್ರಿಗಳಾದ ನರೇಂದ್ರಮೋದಿ ಅವರ 75ನೇ ಹುಟ್ಟುಹಬ್ಬದ ಅಂಗವಾಗಿ ನಗರದ ಹರಿಶ್ಚಂದ್ರಘಾಟ್ ನಲ್ಲಿನ ವೇದಾವತಿ ಕಾಲೇಜಿನಲ್ಲಿ ಸೆಪ್ಟಂಬರ್ 28ರಂದು ಬೆಳಿಗ್ಗೆ 8.30 ಗಂಟೆಗೆ ಭಾರತೀಯ ಜನತಾ ಪಾರ್ಟಿ ಹಿರಿಯೂರು ಮಂಡಲದ ವತಿಯಿಂದ ಸೇವಾ ಪಾಕ್ಷಿಕ ಅಭಿಯಾನದ 3ನೇ ಹಂತದ ಕಾರ್ಯಾಗಾರವನ್ನು ಹಾಗೂ ಕ್ರೀಡೆ ಮತ್ತು ಮ್ಯಾರಥಾನ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂಬುದಾಗಿ ತಾಲ್ಲೂಕು ಬಿಜೆಪಿ ಮಂಡಲ ಅಧ್ಯಕ್ಷರಾದ ಕೆ.ಅಭಿನಂದನ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಈ ಕಾರ್ಯಕ್ರಮಕ್ಕೆ ಪಕ್ಷದ ಎಲ್ಲಾ ಹಿರಿಯ ಮುಖಂಡರು, ಎಲ್ಲಾ ಮೋರ್ಚಾದ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಎಲ್ಲಾ ಕ್ರೀಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿಕೊಡಬೇಕು ಎಂಬುದಾಗಿ ಅವರು ಈ ಮೂಲಕ ಮನವಿ ಮಾಡಿದ್ದಾರೆ.