May 31, 2026
0000006

ಹಿರಿಯೂರು :

ನಮ್ಮ ತಂದೆಯವರಾದ ಡಿ.ಸುಧಾಕರ್ ರವರನ್ನು ಬೆಂಬಲಿಸಿ ಮುನ್ನಡೆಸಿದಂತೆ ಮುಂದಿನ ದಿನಗಳಲ್ಲಿಯೂ ನನ್ನ ಕೈ ಹಿಡಿದು, ಮುನ್ನಡೆಸಬೇಕು, ನಿಮ್ಮೆಲ್ಲರ ಆಶೀರ್ವಾದ ಮತ್ತು ಬೆಂಬಲ ಸದಾ ನಮ್ಮ ಕುಟುಂಬದ ಮೇಲೆ ಇರಲಿ, ನಿಮ್ಮ ಪ್ರೀತಿ, ವಿಶ್ವಾಸ ಮತ್ತು ಸಹಕಾರವೇ ನಮ್ಮ ಶಕ್ತಿ. ಎಂಬುದಾಗಿ ಸಚಿವ ಡಿ.ಸುಧಾಕರ್ ರವರ ಪುತ್ರ ಸುಹಾಸ್ ಸುಧಾಕರ್ ಮನವಿ ಮಾಡಿದರು.

ನಗರದ ವಾರ್ಡ್ ನಂ. 1ರ ಕಾಂಗ್ರೆಸ್ ಪಕ್ಷದ ಮುಖಂಡರು, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಾರ್ವಜನಿಕರ ಮನೆಗಳಿಗೆ ಭೇಟಿ ನೀಡಿ, ಕ್ಷೇತ್ರದ ಶಾಸಕರು ಹಾಗೂ ಸಚಿವರಾಗಿದ್ದ ತಮ್ಮ ತಂದೆಯವರಾದ ಡಿ.ಸುಧಾಕರ್ ರವರಿಗೆ ತೋರಿದ ಪ್ರೀತಿ, ಬೆಂಬಲ ಮತ್ತು ಆಶೀರ್ವಾದಕ್ಕೆ ಹೃದಯಪೂರ್ವಕ ಧನ್ಯವಾದಗಳನ್ನು ತಿಳಿಸಿ, ಮಾತನಾಡಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಖಾದಿರಮೇಶ್, ಕಾಂಗ್ರೆಸ್ ಮುಖಂಡರುಗಳಾದ ಈ.ಮಂಜುನಾಥ್, ವಕೀಲರಾದ ಮಹಂತೇಶ್, ಶಿವುಯಾದವ್, ಅರುಣ್ ಕುಮಾರ್, ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರುಗಳು ಹಾಗೂ ಕಾರ್ಯಕರ್ತರು, 1 ನೇ ವಾರ್ಡ್ ನಿವಾಸಿಗಳು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *