
ಹಿರಿಯೂರು :
ನಮ್ಮ ತಂದೆಯವರಾದ ಸಚಿವ ಡಿ.ಸುಧಾಕರ್ ರವರಿಗೆ ನೀವು ನೀಡಿದ ಪ್ರೀತಿ, ಬೆಂಬಲ ಮತ್ತು ಆಶೀರ್ವಾದವನ್ನು ಸದಾ ಸ್ಮರಿಸುತ್ತೇನೆ. ಮುಂದೆಯೂ ನಿಮ್ಮ ಆಶೀರ್ವಾದ ಹಾಗೂ ಸಹಕಾರ ನಮ್ಮೊಂದಿಗೆ ಇರಲಿ ಎಂಬುದಾಗಿ ಸಚಿವ ಡಿ.ಸುಧಾಕರ್ ರವರ ಪುತ್ರ ಸುಹಾಸ್ ಸುಧಾಕರ್ ಹೇಳಿದರು.
ನಗರದ ವಾರ್ಡ್ ನಂಬರ್ 28ರಲ್ಲಿ ಸಾರ್ವಜನಿಕರ ಮನೆಗಳಿಗೆ ಭೇಟಿ ನೀಡಿ, ಅವರೊಂದಿಗೆ ಸಮಾಲೋಚನೆಯನ್ನು ನಡೆಸಿ, ನಂತರ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಮುಖಂಡರು, ಕಾರ್ಯಕರ್ತರೊಂದಿಗೆ ಅಲ್ಲಿನ ಜನರ ಸಮಸ್ಯೆಗಳು, ಸಲಹೆಗಳು ಹಾಗೂ ಅಭಿಪ್ರಾಯಗಳನ್ನು ಆಲಿಸಿ, ಮುಂದಿನ ದಿನಗಳಲ್ಲಿ ವಾರ್ಡ್ ಅಭಿವೃದ್ಧಿಗೆ ಬೇಕಾದ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಚರ್ಚಿಸಿದರು.
