
ಹಿರಿಯೂರು ;
ನಮ್ಮ ತಂದೆಯವರು ತೋರಿದ ಜನಸೇವೆಯ ಹಾದಿಯಲ್ಲಿ, ನಿಮ್ಮೆಲ್ಲರ ಸಹಕಾರದೊಂದಿಗೆ ನಾನು ಮುಂದುವರಿಯುತ್ತೇವೆ. ಜನರ ಪ್ರೀತಿ, ವಿಶ್ವಾಸ ಮತ್ತು ಆಶೀರ್ವಾದವೇ ನಮ್ಮ ಶಕ್ತಿ. ನಿಮ್ಮ ಪ್ರೀತಿ ಮತ್ತು ಬೆಂಬಲ ಸದಾ ಹೀಗೆ ಇರಲಿ ಎಂಬುದಾಗಿ ಸಚಿವರಾದ ಡಿ.ಸುಧಾಕರ್ ಪುತ್ರ ಸುಹಾಸ್ ಸುಧಾಕರ್ ಹೇಳಿದರು.
ತಾಲ್ಲೂಕಿನ ಖಂಡೇನಹಳ್ಳಿ ಗ್ರಾಮದಲ್ಲಿ ಸಾರ್ವಜನಿಕರೊಂದಿಗೆ ಭೇಟಿ ಮಾಡಿ, ಅವರ ಸಮಸ್ಯೆಗಳು ಹಾಗೂ ಅಭಿಪ್ರಾಯಗಳನ್ನು ಆಲಿಸಿ, ನಂತರ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು, ಪಕ್ಷದ ಕಾರ್ಯಕರ್ತರು ಹಾಗೂ ಸಚಿವ ಡಿ.ಸುಧಾಕರ್ ರವರ ಅಭಿಮಾನಿಗಳು ಉಪಸ್ಥಿತರಿದ್ದರು.
