June 18, 2026
0003

ಹಿರಿಯೂರು :

ನಗರದ ವಾಗ್ದೇವಿ ವಿದ್ಯಾಸಂಸ್ಥೆ ಇಂದು ಬೆಳಿಗ್ಗೆ ಚಿಕ್ಕ ಮಕ್ಕಳು ಶಾಲೆಯಲ್ಲಿ ಕೊಟ್ಟ ಹಾಲು ಕುಡಿದು ಬಹಳ ಮಕ್ಕಳು ವಾಂತಿ ಮಾಡಿಕೊಂಡು, ಮಕ್ಕಳು ಅಸ್ವಸ್ತಗೊಂಡಿದ್ದಾರೆ, ತಕ್ಷಣವೇ ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡಿದ್ದಾರೆ, ಸಾರ್ವಜನಿಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂಬುದಾಗಿ ಸಾಮಾಜಿಕ ಕಾರ್ಯಕರ್ತ ಕಸವನಹಳ್ಳಿ ರಮೇಶ್ ತಿಳಿಸಿದ್ದಾರೆ.

ನಗರದ ಸರ್ಕಾರಿ ಆಸ್ಪತ್ರೆಗೆ ಮಂಜುನಾಥ್ ಮಾಳಿಗೆರವರ ಜೊತೆ ಸ್ಥಳಕ್ಕೆ ಭೇಟಿ ನೀಡಿದ, ಅವರು ಹಾಲು ಕುಡಿದು ಅಸ್ತ್ವಸ್ತ್ಯಗೊಂಡ ಮಕ್ಕಳ ಯೋಗಕ್ಷೇಮವನ್ನು ವಿಚಾರಿಸಿ, ನಂತರ ಅವರು ಮಾತನಾಡಿದರು.

ಈ ಘಟನೆಯ ಕುರಿತು ಪ್ರತಿಕ್ರಿಯಿಸಿದ ವಾಗ್ದೇವಿ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಕೆ.ವಿ.ಅಮರೇಶ್ ರವರು ಹಾಲು ಕುಡಿದು ಅಸ್ವಸ್ತರಾದ ಮಕ್ಕಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿದ್ದು, ಮಕ್ಕಳಿಗೆ ಯಾವುದೇ ತೊಂದರೆಯಾಗಿಲ್ಲ, ಹಾಲನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ರಿಪೋರ್ಟ್ ಬಂದ ನಂತರ ತೀರ್ಮಾನ ಕೈಗೊಳ್ಳಲಾಗುವುದು ಎಂಬುದಾಗಿ ಹೇಳಿದರು.

About The Author

Leave a Reply

Your email address will not be published. Required fields are marked *