July 29, 2026
001

ಹಿರಿಯೂರು :

ನಗರದ ಕಾಂಗ್ರೆಸ್ ಕಚೇರಿಯಲ್ಲಿ ತಾಲೂಕಿನ ಎಲ್ಲಾ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಎಲ್ಲಾ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಲಾಯಿತು.

ಈ ಸಭೆಯಲ್ಲಿ ಮಾಜಿ ಸಚಿವರಾದ ಜಿ.ಟಿ. ಪರಮೇಶ್ವರ ನಾಯಕ್ ಅವರು ಭಾಗವಹಿಸಿ, ಮತ ಪರಿಷ್ಕರಣೆ ಪ್ರಕ್ರಿಯೆ, ಪಕ್ಷದ ಸಂಘಟನೆ ಹಾಗೂ ಕಾರ್ಯಕರ್ತರ ಜವಾಬ್ದಾರಿಗಳ ಕುರಿತು ಮಾರ್ಗದರ್ಶನ ನೀಡಿದರು.

ಇದೇ ಸಂದರ್ಭದಲ್ಲಿ ಮತದಾರರ ಹಕ್ಕುಗಳನ್ನು ಕಾಪಾಡಿ, ಪ್ರತಿಯೊಬ್ಬ ಅರ್ಹ ಮತದಾರರ ಹೆಸರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗುವಂತೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಲು ಸಭೆಯಲ್ಲಿ ಕರೆ ನೀಡಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಕೆ. ತಾಜ್ ಪೀರ್, ಆದಿ ಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಜಿ.ಎಸ್. ಮಂಜುನಾಥ್, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಆರ್. ಶಿವಣ್ಣ, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶಶಿಕಲಾ ಸುರೇಶ್ ಬಾಬು ಸೇರಿದಂತೆ ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *