
ಹಿರಿಯೂರು :
ರೈತರ ಬೋರ್ವೆಲ್ ಗಳಿಗೆ ಅಳವಡಿಸಿರುವ ಪರಿವರ್ತಕಗಳು ಸುಟ್ಟರೆ 72 ಗಂಟೆಯ ಒಳಗಡೆ ಪರಿವರ್ತಕ ರಿಪೇರಿ ಮಾಡಿ ರೈತರ ತೋಟಗಳಿಗೆ ಅಳವಡಿಸುವ ಸರ್ಕಾರದ ಆದೇಶವಿದ್ದರೂ ಸಹ ಇಲಾಖೆ ಅಧಿಕಾರಿಗಳು ತಿಂಗಳುಗಟ್ಟಲೆ ಅಲೆದಾಡಿಸುತ್ತಿದನ್ನ ರಾಜ್ಯ ರೈತ ಸಂಘ ಗಮನಿಸಿ ಈ ಬಗ್ಗೆ ಒಂದು ವಾರದೊಳಗೆ ಸರಿಪಡಿಸದಿದ್ದರೆ ಇಲಾಖೆ ಮುಂದೆ ಪ್ರತಿಭಟಿಸುವುದಾಗಿ ಎಚ್ಚರಿಸಿದ್ದರೂ ಸಹ ಯಾವುದೇ ಪ್ರಯೋಜನವಾಗಿಲ್ಲ ಎಂಬುದಾಗಿ ರಾಜ್ಯ ರೈತ ಸಂಘದ ರಾಜ್ಯ ವಿಭಾಗೀಯ ಉಪಾಧ್ಯಕ್ಷರಾದ ಕೆ.ಸಿ.ಹೊರಕೇರಪ್ಪ ಆರೋಪಿಸಿದ್ದಾರೆ.
ನಗರದ ಬೆಸ್ಕಾಂ ಕಚೇರಿ ಮುಂದೆ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಭಾರತೀಯ ಕಿಸಾನ್ ಸಂಘದ ನೇತೃತ್ವದಲ್ಲಿ ರೈತರ ಬೋರ್ವೆಲ್ ಗಳಿಗೆ ಅಳವಡಿಸಿರುವ ಪರಿವರ್ತಕಗಳ ಸರಿಪಡಿಸುವಂತೆ ಒತ್ತಾಯಿಸಿ, ಬೆಸ್ಕಾಂ ಅಧಿಕಾರಿಗಳಿಗೆ ಮನವಿಪತ್ರಸಲ್ಲಿಸಿ, ನಂತರ ಅವರು ಮಾತನಾಡಿದರು.
ತಾಲೂಕಿನಲ್ಲಿ ಸಕಾಲಕ್ಕೆ ಮಳೆಯಾಗದೆ ಅಂತರ್ಜಲ ಪಾತಾಳಕ್ಕೆ ಸೇರಿದ್ದು ಮುಂಗಾರು ಮಳೆಯು ಸಹ ಬಾರದೆ ರೈತ ಬೆಳೆದಿರುವ ತೋಟಗಾರಿಕೆ ಮತ್ತು ಇತರೆ ಬೆಳೆಗಳು ಒಣಗುತ್ತಿದ್ದು ರೈತರು ನಷ್ಟ ಅನುಭವಿಸುತ್ತಿದ್ದು ಕೂಡಲೇ ಪರಿವರ್ತಕಗಳನ್ನು ದುರಸ್ತಿಪಡಿಸಿ, ರೈತರಿಗೆ ಇಲಾಖೆಗೆ ಅಲೆದಾಡಿಸುವುದನ್ನು ತಪ್ಪಿಸಿ ಗುಣಮಟ್ಟದ ವಿದ್ಯುತ್ ಪರಿವರ್ತಕಗಳ ಕೊಡುವಂತೆ ಒತ್ತಾಯಿಸಿದರು.
ಈ ಬಗ್ಗೆ ಸ್ಟೋರ್ ಅಧಿಕಾರಿ ಹಾಗೂ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಮಹಾವೀರ್ ಸ್ಥಳಕ್ಕೆ ಹಾಜರಾಗಿ ಬಾಕಿ ಇರುವ ಎಲ್ಲಾ ರೈತರ ಸುಟ್ಟ ಪರಿವರ್ತಕಗಳನ್ನು ಸೋಮವಾರದೊಳಗೆ ನೀಡುವುದಾಗಿ ಭರವಸೆ ನೀಡಿದ್ದರಿಂದ ತಾತ್ಕಾಲಿಕವಾಗಿ ಪ್ರತಿಭಟನೆಯನ್ನು ಕೈ ಬಿಡಲಾಯಿತು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ವಿಭಾಗೀಯ ಉಪಾಧ್ಯಕ್ಷರಾದ ಕೆ.ಸಿ.ಹೊರಕೇರಪ್ಪ, ಕಾರ್ಯಪಾಲಕ ಅಭಿಯಂತರರಾದ ಪೀರ್ ಸಾಬ್, ತಾಲೂಕು ರೈತ ಸಂಘದ ಅಧ್ಯಕ್ಷ ಬಿ.ಓ.ಶಿವಕುಮಾರ್, ಜಿಲ್ಲಾ ಉಪಾಧ್ಯಕ್ಷ ಎಂ.ಲಕ್ಷ್ಮಿಕಾಂತ್, ಬಿ.ಡಿ.ಶ್ರೀನಿವಾಸ್, ದಸ್ತಗಿರಿ ಸಾಬ್ ಚೇತನ್ ಯಳನಾಡು, ಮೇಟಿಕುರ್ಕೆ ತಿಪ್ಪೇಸ್ವಾಮಿ, ಭಾರತೀಯ ಕಿಸಾನ್ ಸಂಘದ ಗಡಾರಿ ಕೃಷ್ಣಪ್ಪ, ಕಾತ್ರಿಕೇನಳ್ಳಿ ಮಂಜುನಾಥ್, ಕೆ.ಸಿ.ಚಿಕ್ಕೇಗೌಡ, ಮಹೇಶ್, ಸುಬ್ರಮಣ್ಯ, ಮಣಿಕಂಠ, ಜೈಪ್ರಕಾಶ್, ಹರೀಶ್, ನಾಗಣ್ಣ, ಗಿರೀಶ್, ದೊಡ್ಡಘಟ್ಟಕುಮಾರ್, ಮಹಿಳಾ ಘಟಕದ ವಿ.ಕಲ್ಪನಾ, ಶಶಿಕಲಾ, ಡಾ.ಲಕ್ಷ್ಮಕ್ಕ, ಲಕ್ಕವನಹಳ್ಳಿಸುಬ್ರಮಣಿ, ಲಕ್ಷ್ಮಿ, ಕರಿಯಮ್ಮ, ಹೆಚ್.ರಂಗಸ್ವಾಮಿ, ಐನಹಳ್ಳಿ ರವೀಶ್, ಉಮಾಪತಿ, ಈಶ್ವರಗೆರೆ ನಾಗರಾಜ್, ವಿನಯ್, ಬೋಚಪುರ ರಮೇಶ್, ಮರದ ಮುತ್ತು, ಬ್ಯಾಡರಹಳ್ಳಿ ಶ್ರೀನಿವಾಸ್, ಎಂ.ಪಿ.ನಾಗರಾಜ್, ನಾಗಣ್ಣ ಇತರೆ ಅನೇಕ ರೈತರು ಉಪಸ್ಥಿತರಿದ್ದರು.
