July 29, 2026
001

ಹಿರಿಯೂರು :   

ಕಾಂಗ್ರೆಸ್ ಪಕ್ಷದ ಹಿರಿಯರು ಹಾಗೂ ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ನಾನು ಸದಾ ಬದ್ಧನಾಗಿದ್ದು, ಹಿರಿಯೂರು ಜನರ ಸೇವೆಯೇ ನನ್ನ ಮೊದಲ ಆದ್ಯತೆಯಾಗಿದ್ದು, ಹಿರಿಯೂರಿನ ಜನರ ಸೇವೆ ಮಾಡಲು ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್ ಕೊಡಿಸಬೇಕು ಎಂಬುದಾಗಿ ಸುಹಾಸ್ ಸುಧಾಕರ್ ಮನವಿ ಮಾಡಿದರು.

ತಾಲೂಕಿನ ವಾಲ್ಮೀಕಿ ಸಮಾಜದ ಹಿರಿಯ ಮುಖಂಡರು ಲೋಕೋಪಯೋಗಿ ಸಚಿವರು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಶ್ರೀಸತೀಶ್ ಜಾರಕಿಹೊಳಿರವರನ್ನು ಭೇಟಿ ಮಾಡಿ, ನನ್ನ ಮೇಲೆ ವಿಶ್ವಾಸ ವ್ಯಕ್ತಪಡಿಸಿ ಕಾಂಗ್ರೆಸ್ ಪಕ್ಷದ ಟಿಕೆಟ್ ಕೊಡಿಸಬೇಕೆಂದು ಮನವಿ ಮಾಡಿ, ನಂತರ ಅವರು ಮಾತನಾಡಿದರು.

ಕಳೆದ 2008 ರಿಂದ ನನ್ನ ತಂದೆಯವರಾದ ದಿವಂಗತ ಡಿ.ಸುಧಾಕರ್ ರವರೊಂದಿಗೆ ನಿಷ್ಠೆಯಿಂದ ನಿಂತು, ಅವರ ಅಭಿವೃದ್ಧಿ ಕಾರ್ಯಗಳಿಗೆ ಬೆಂಬಲ ನೀಡಿದ ವಾಲ್ಮೀಕಿ ಸಮಾಜದ ಪ್ರೀತಿ ಮತ್ತು ಆಶೀರ್ವಾದ ನಮ್ಮ ಕುಟುಂಬಕ್ಕೆ ಸದಾ ದೊಡ್ಡ ಶಕ್ತಿಯಾಗಿದೆ. ನಮ್ಮ ಮೇಲೆ ಅವರಿಗೆ ಇರುವ ಪ್ರೀತಿ, ವಿಶ್ವಾಸಕ್ಕೆ ನಾನು ಸದಾ ಋಣಿಯಾಗಿದ್ದೇನೆ ಎಂದರಲ್ಲದೆ,

ನನ್ನ ಮೇಲೆ ನಂಬಿಕೆಯಿಟ್ಟು ಕಾಂಗ್ರೆಸ್ ಪಕ್ಷದ ಟಿಕೆಟ್ ಕೊಡುವಂತೆ ಮನವಿ ಮಾಡಿದ ವಾಲ್ಮೀಕಿ ಸಮಾಜದ ಎಲ್ಲ ಹಿರಿಯ ಮುಖಂಡರುಗಳಿಗೆ ಹೃತ್ಪೂರ್ವಕ ಧನ್ಯವಾದಗಳು. ನಿಮ್ಮ ನಂಬಿಕೆಯನ್ನು ಉಳಿಸಿಕೊಳ್ಳುವ ಪ್ರಾಮಾಣಿಕ ಪ್ರಯತ್ನವನ್ನು ನಾನು ಮಾಡುತ್ತೇವೆ ಎಂಬುದಾಗಿ ಈ ಸಂದರ್ಭದಲ್ಲಿ ಭರವಸೆಯನ್ನು ನೀಡಿದರು.

ಈ ಸಂದರ್ಭದಲ್ಲಿ ವಾಲ್ಮೀಕಿ ಸಮಾಜದ ಹಿರಿಯ ಮುಖಂಡರುಗಳು, ಕಾಂಗ್ರೆಸ್ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *