
ಧರ್ಮಸ್ಥಳ :
ಧರ್ಮಸ್ಥಳದ ಶ್ರೀಮಂಜುನಾಥಸ್ವಾಮಿ ಸನ್ನಿಧಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಿರಿಯೂರು ತಾಲೂಕು ಘಟಕದ ವತಿಯಿಂದ ವರುಣನ ಕೃಪೆಗಾಗಿ ಚಿತ್ರದುರ್ಗ ಜಿಲ್ಲೆಗೆ ಅತಿ ಹೆಚ್ಚು ಮಳೆಯಾಗಿ ಕೆರೆ ಕುಂಟೆಗಳು, ಹಳ್ಳಕೊಳ್ಳಗಳು ತುಂಬಿ ಹರಿಯಲಿ, ಚಿತ್ರದುರ್ಗ ಜಿಲ್ಲೆ ಸುಭಿಕ್ಷವಾಗಿರಲಿ, ರೈತರ ಬಾಳು ಹಸನಾಗಲಿ ಎಂಬುದಾಗಿ ಪ್ರಾರ್ಥಿಸಲಾಯಿತು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ವಿಭಾಗೀಯ ಉಪಾಧ್ಯಕ್ಷರಾದ ಕೆ.ಸಿ.ಹೊರಕೇರಪ್ಪ, ಹಿರಿಯೂರು ತಾಲೂಕು ಘಟಕದ ಅಧ್ಯಕ್ಷರಾದ ಬ್ಯಾಡರಹಳ್ಳಿಶಿವಕುಮಾರ್, ಜಿಲ್ಲಾ ಉಪಾಧ್ಯಕ್ಷರಾದ ಎಂ.ಲಕ್ಷ್ಮೀಕಾಂತ್, ತಾಲೂಕು ಯುವಘಟಕದ ಅಧ್ಯಕ್ಷರಾದ ಚೇತನ್ ಯಳನಾಡು ಎಲ್ಲರೂ ಸೇರಿ ಪ್ರಾರ್ಥಿಸಿದರು.
