July 29, 2026
001

ಹಿರಿಯೂರು :

ನಗರದ ಮುಖ್ಯರಸ್ತೆಯು ತುಂಬಾ ಕಿರಿದಾಗಿದ್ದು, ಈ ರಸ್ತೆಯನ್ನು ಅಗಲೀಕರಣ ಮಾಡಬೇಕೆಂದು ಸುಮಾರು ವರ್ಷಗಳಿಂದ ನಿರಂತರ ಹೋರಾಟ ಮಾಡುತ್ತಿದ್ದರೂ ಸಹ ಯಾವುದೇ ಪ್ರಯೋಜನವಾಗಿಲ್ಲ ಎಂಬುದಾಗಿ ಕರ್ನಾಟಕ ರಾಜ್ಯ ರೈತಸಂಘ ಹಾಗೂ ಹಸಿರುಸೇನೆ ಜಿಲ್ಲಾಧ್ಯಕ್ಷರಾದ ಕೆ.ಟಿ.ತಿಪ್ಪೇಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

ನಗರದ ನಗರಸಭೆ ಆವರಣದಲ್ಲಿ ಕರ್ನಾಟಕ ರಾಜ್ಯ ರೈತಸಂಘ ಹಾಗೂ ಹಸಿರುಸೇನೆ ವತಿಯಿಂದ   ಹಿರಿಯೂರು ನಗರದ ಮುಖ್ಯ ರಸ್ತೆಯನ್ನು ಅಗಲೀಕರಣ ಮಾಡುವಂತೆ ಒತ್ತಾಯಿಸಿ, ನಗರಸಭೆ ಪೌರಾಯುಕ್ತರ ಮುಖಾಂತರ ಜಿಲ್ಲಾಧಿಕಾರಿಗಳಿಗೆ ಮನವಿಪತ್ರವನ್ನು ಸಲ್ಲಿಸಿ, ನಂತರ ಅವರು ಮಾತನಾಡಿದರು.

ಈ ಹಿಂದೆ ಜಿಲ್ಲಾಧಿಕಾರಿಗಳು ಜಿಲ್ಲಾ ಉಸ್ತುವಾರಿ ಮಂತ್ರಿಗಳು ಮತ್ತು ನಗರಸಭೆಯ ಎಲ್ಲಾ ಸದಸ್ಯರುಗಳು ಸ್ಥಳ ಪರಿಶೀಲನೆ ಮಾಡಿ, ಇನ್ನೂ ಒಂದು ವಾರದೊಳಗಾಗಿ ಎಲ್ಲ ಕಟ್ಟಡಗಳನ್ನು ತೆರವುಗೊಳಿಸಿ ರಸ್ತೆ ಅಗಲೀಕರಣ ಮಾಡುತ್ತೇವೆ, ಇದಕ್ಕೆ ಬೇಕಾದ ಎಲ್ಲಾ ಅನುದಾನ ಇದೆ ಇನ್ನೂ ಒಂದು ವಾರದೊಳಗಾಗಿ ಕಾಮಗಾರಿ ಪ್ರಾರಂಭಿಸುತ್ತೇವೆಂದು ಹೇಳಿ ಒಂದು ವರ್ಷವಾದರೂ ರಸ್ತೆ ಅಗಲೀಕರಣ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದಿಲ್ಲ

ಆದ್ದರಿಂದ ಬರುವ ಉಪಚುನಾವಣೆ ಒಳಗಾಗಿ ರಸ್ತೆ ಅಗಲೀಕರಣ ಕಾಮಗಾರಿ ಮಾಡದೆ ಹೋದರೆ ಕರ್ನಾಟಕ ರಾಜ್ಯ ರೈತಸಂಘ ಹಾಗೂ ಹಸಿರುಸೇನೆ ವತಿಯಿಂದ ಮುಂಬರುವ ಉಪಚುನಾವಣೆಯನ್ನು ಬಹಿಷ್ಕಾರ ಮಾಡಬೇಕಾಗುತ್ತದೆ ಎಂಬುದಾಗಿ ಜಿಲ್ಲಾಧ್ಯಕ್ಷರಾದ ಕೆ.ಟಿ.ತಿಪ್ಪೇಸ್ವಾಮಿರವರು ಈ ಮೂಲಕ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ರೈತಮುಖಂಡರುಗಳಾದ ಆಲೂರುಸಿದ್ದರಾಮಣ್ಣ, ವೆಂಕಟೇಶ್ ಬಳಗಟ್ಟ, ತಿಮ್ಮಣ್ಣಜೆಜೆಹಳ್ಳಿ, ಈರಣ್ಣ, ಕನ್ಯಪ್ಪ, ತಿಪ್ಪೇಸ್ವಾಮಿ, ಮಂಜುನಾಥ್, ಚಂದ್ರಶೇಖರ್, ಶಿವಣ್ಣ, ರಾಮಕೃಷ್ಣ, ಬಾಲಕೃಷ್ಣ, ರಾಮಣ್ಣ, ಹೊರಕೇರಪ್ಪ ಸೇರಿದಂತೆ ಅನೇಕ ರೈತ ಮುಖಂಡರುಗಳು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *