
ಹಿರಿಯೂರು :
ಸಮಾಜ ಸೇವಕರಾಗಿ ಕಾರ್ಯನಿರ್ವಹಿಸುವ ಮೂಲಕ ಜನಪ್ರಿಯತೆ ಗಳಿಸಿರುವ ಪತ್ರಿಕಾರತ್ನ ಪ್ರಶಸ್ತಿಪುರಸ್ಕೃತರಾಗಿರುವ ಸರಳ, ಸಜ್ಜನಿಕೆಯ, ಸ್ನೇಹಮಯ, ಕ್ರಿಯಾಶೀಲ ವ್ಯಕ್ತಿತ್ವದ ಹಿರಿಯೂರಿನ ಹೆಸರಾಂತ ಪತ್ರಕರ್ತರು ಹಾಗೂ ಸಾಹಿತಿಗಳಾದ ಎಂ.ಕಿರಣ್ ಮಿರಜ್ಕರ್ ರವರಿಗೆ “ಹಿರಿಯೂರುನ್ಯೂಸ್” ತಂಡದಿಂದ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರಲಾಗಿದೆ.
ಅವರ ಈ ಹುಟ್ಟುಹಬ್ಬದ ಸಂದರ್ಭದಲ್ಲಿ ನಮ್ಮ ಆತ್ಮೀಯರಾದ ಎಂ.ಕಿರಣ್ ಮಿರಜ್ಕರ್ ರವರಿಗೆ ಮತ್ತು ಅವರ ಕುಟುಂಬ ವರ್ಗದವರಿಗೆ ಆ ಭಗವಂತ ಆರೋಗ್ಯ ಆಯಸ್ಸು ಯಶಸ್ವಿನ ಜೊತೆಗೆ ಜೀವನದಲ್ಲಿ ಸುಖ ಶಾಂತಿ ನೆಮ್ಮದಿಯನ್ನು ಕೊಟ್ಟು ಕಾಪಾಡಲಿ ಎಂಬುದಾಗಿ “ಹಿರಿಯೂರುನ್ಯೂಸ್” ತಂಡದ ವತಿಯಿಂದ ಪತ್ರಕರ್ತರುಗಳಾದ ಆಲೂರುಹನುಮಂತರಾಯಪ್ಪ ಹಾಗೂ ಪಿ.ಆರ್.ಸತೀಶ್ ಬಾಬು, ಗೋಸಿಕೆರೆ ರಂಗನಾಥ್, ಕೇಶವಮೂರ್ತಿ, ಶ್ರೀಪಾದ್ ವಸಿಷ್ಠ, ಶಿವರಾಜ್, ಪರಮೇಶ್ವರಪ್ಪ, ವೆಂಕಟೇಶ್, ಇರ್ಫಾನ್ ವುಲ್ಲಾ, ಹಿದಾಯತ್ ವುಲ್ಲಾ ಇವರುಗಳು ಶುಭಹಾರೈಸಿದ್ದಾರೆ.
