July 29, 2026
0006

ಹಿರಿಯೂರು :

ನಗರದ ನೆಹರು ಕ್ರೀಡಾಂಗಣದಲ್ಲಿ ನಡೆಯುವ ಕರ್ನಾಟಕ ರಾಜ್ಯ ಕೋಕೋ ಸಂಸ್ಥೆ ಬೆಂಗಳೂರು, ಚಿತ್ರದುರ್ಗ ಜಿಲ್ಲಾ ಖೋ-ಖೋ ಸಂಸ್ಥೆ ಹಾಗೂ ಹಿರಿಯೂರಿನ ಗರುಡ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ ಇವರುಗಳ ಸಂಯುಕ್ತಾಶ್ರಯದಲ್ಲಿ ಇದೇ ಮೊದಲ ಬಾರಿಗೆ ನಡೆಯುವ ರಾಜ್ಯಮಟ್ಟದ ಸಬ್ ಜೂನಿಯರ್ಸ್ ಬಾಲಕರ ಮತ್ತು ಬಾಲಕಿಯರ ಕೋಕೋ ಪಂದ್ಯಾವಳಿಗೆ ಆಗಮಿಸಿ, ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಿ, ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂಬುದಾಗಿ ಗರುಡಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಗೌರವಾಧ್ಯಕ್ಷರಾದ ಡಿ.ನಾರಾಯಣರೆಡ್ಡಿ ಮನವಿ ಮಾಡಿದ್ದಾರೆ.

ನಗರದ ನೆಹರು ಮೈದಾನದಲ್ಲಿರುವ ವಾಣಿವಿಲಾಸ ವಿದ್ಯಾಸಂಸ್ಥೆ ಸಭಾಂಗಣದಲ್ಲಿ ರಾಜ್ಯಮಟ್ಟದ ಸಬ್ ಜೂನಿಯರ್ಸ್ ಬಾಲಕರ ಮತ್ತು ಬಾಲಕಿಯರ ಕೋಕೋ ಪಂದ್ಯಾವಳಿಗೆ ಆಗಮಿಸುವಂತೆ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರು ಹಾಗೂ ವಾಣಿವಿಲಾಸ ವಿದ್ಯಾಸಂಸ್ಥೆ ಕಾರ್ಯದರ್ಶಿಗಳಾದ ಆಲೂರುಹನುಮಂತರಾಯಪ್ಪನವರಿಗೆ ಆಹ್ವಾನಪತ್ರಿಕೆ ಪತ್ರಿಕೆ ನೀಡುವ ಮೂಲಕ ಕಾರ್ಯಕ್ರಮಕ್ಕೆ ಆಹ್ವಾನಿಸಿ ನಂತರ ಮಾತನಾಡಿದರು.

ಆಹ್ವಾನ ಸ್ವೀಕರಿಸಿ ಮಾತನಾಡಿದ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ಆಲೂರುಹನುಮಂತರಾಯಪ್ಪನವರು, ಖೋ-ಖೋ ಒಂದು ಭಾರತೀಯ ಕ್ರೀಡೆಯಾಗಿದ್ದು, ಈ ಕ್ರೀಡೆಯನ್ನು ಬೆಂಬಲಿಸುವ ನಿಟ್ಟಿನಲ್ಲಿ ರಾಜ್ಯಮಟ್ಟದ ಖೋ-ಖೋ ಪಂದ್ಯಾವಳಿಯಲ್ಲಿ ನಮ್ಮ ಹಿರಿಯೂರು ನಗರದಲ್ಲಿ ನಡೆಸುತ್ತಿರುವುದು ಅತ್ಯಂತ ಸಂತಸದ ವಿಚಾರವಾಗಿದ್ದು, ಇದಕ್ಕೆ ನಮ್ಮ ಸಂಪೂರ್ಣ ಸಹಕಾರವಿದ್ದು, ನಿಮ್ಮ ಪಂದ್ಯಾವಳಿ ಯಶಸ್ವಿಯಾಗಲಿ ಎಂಬುದಾಗಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಗರುಡಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಗೌ.ಅಧ್ಯಕ್ಷರಾದ ಡಿ.ನಾರಾಯಣರೆಡ್ಡಿ,  ಪ್ರಧಾನ ಕಾರ್ಯದರ್ಶಿ ಬಿ.ಎಸ್.ಶಿವಪ್ರಸಾದ್, ಸಹ ಕಾರ್ಯದರ್ಶಿಗಳಾದ ಎನ್.ವೆಂಕಟೇಶ್ ವಸಂತನಗರ, ಈ.ದಾದಾಪೀರ್, ಖಜಾಂಚಿ ಶಿವಪ್ರಸಾದ್, ಸಂಘಟನಾ ಕಾರ್ಯದರ್ಶಿ ಬಿ.ಸುನೀಲ್,   ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *