
ಹಿರಿಯೂರು :
ಕುಟುಂಬದಲ್ಲಿ ಧರ್ಮಪತ್ನಿಯಾಗಿ, ತಾಯಿಯಾಗಿ ತಮ್ಮ ಜವಾಬ್ದಾರಿಯನ್ನು ಯಾವುದೇ ಲೋಪವಿಲ್ಲದಂತೆ ಪೂರೈಸಿ, ಇದೀಗ ವಯೋಸಹಜ ಕಾಯಿಲೆಯಿಂದ ನಿಧನರಾದ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡರವರ ಪತ್ನಿ ಶ್ರೀಮತಿ ಚನ್ನಮ್ಮ ರವರಿಗೆ “ಹಿರಿಯೂರುನ್ಯೂಸ್”ತಂಡದಿಂದ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಗಿದೆ.
ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡರವರ ಪತ್ನಿ ದಿವಂಗತ ಶ್ರೀಮತಿ ಚನ್ನಮ್ಮರವರ ನಿಧನಕ್ಕೆ ಪುತ್ರರಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮತ್ತು ಮಾಜಿ ಸಚಿವ ರೇವಣ್ಣ ಸೇರಿದಂತೆ ಅವರ ಕುಟುಂಬಸ್ಥರು, ಹಲವಾರು ರಾಜಕೀಯ ಗಣ್ಯರು ಹಾಗೂ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.
ಶ್ರೀಮತಿ ಚನ್ನಮ್ಮರವರ ನಿಧನದ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತನು ಅವರ ಕುಟುಂಬಸ್ಥರಿಗೆ ದಯಪಾಲಿಸಲಿ ಎಂಬುದಾಗಿ “ಹಿರಿಯೂರುನ್ಯೂಸ್” ತಂಡದ ಮುಖ್ಯಸ್ಥರು ಹಾಗೂ ಕರ್ನಾಟಕ ಮಾದ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ಆಲೂರುಹನುಮಂತರಾಯಪ್ಪರವರು ಹಾಗೂ ಹಿರಿಯ ಪತ್ರಕರ್ತರುಗಳಾದ ಹಾಗೂ ಪಿ.ಆರ್.ಸತೀಶ್ ಬಾಬು, ಗೋಸಿಕೆರೆ ರಂಗನಾಥ್, ಕೇಶವಮೂರ್ತಿ, ಶ್ರೀಪಾದ್ ವಸಿಷ್ಠ, ಶಿವರಾಜ್ ನಾಯಕ್, ಉಮೇಶ್ ಯಾದವ್, ಪರಮೇಶ್ವರಪ್ಪ, ವೆಂಕಟೇಶ್, ಇರ್ಫಾನ್ ವುಲ್ಲಾ, ಹಿದಾಯತ್ ವುಲ್ಲಾ ಇವರುಗಳು ಸಂತಾಪ ಸೂಚಿಸಿದ್ದಾರೆ.
