August 1, 2026
002

ಹಿರಿಯೂರು :

ವಾರ್ಡ್‌ನ ಜನತೆ ತೋರಿದ ಪ್ರೀತಿ, ವಿಶ್ವಾಸ ಮತ್ತು ಆತ್ಮೀಯ ಸ್ವಾಗತ ನನ್ನ ಜನಸೇವೆಯ ಪಯಣಕ್ಕೆ ಮತ್ತಷ್ಟು ಶಕ್ತಿ ತುಂಬಿದೆ, ಮುಂದಿನ ದಿನಗಳಲ್ಲಿಯೂ ನಿಮ್ಮೆಲ್ಲರ ಸಹಕಾರ, ಮಾರ್ಗದರ್ಶನ ಮತ್ತು ಆಶೀರ್ವಾದ ಸದಾ ನನ್ನೊಂದಿಗಿರಲಿ ಎಂಬುದಾಗಿ ಸುಹಾನ್ ಸುಧಾಕರ್ ಹೇಳಿದರು.

ನಗರದ ವಾರ್ಡ್ ಸಂಖ್ಯೆ 19ರಲ್ಲಿ ಮನೆ ಮನೆಗೆ ಭೇಟಿ ನೀಡಿ, ಸಾರ್ವಜನಿಕರೊಂದಿಗೆ ಆತ್ಮೀಯವಾಗಿ ಮಾತುಕತೆ ನಡೆಸಿ, ಸ್ಥಳೀಯ ಸಮಸ್ಯೆಗಳು, ಜನರ ಅಗತ್ಯಗಳ ಬಗ್ಗೆ ಚರ್ಚಿಸಿದರು.

ಈ ಸಂದರ್ಭದಲ್ಲಿ ವಾರ್ಡ್‌ನ ಸಲಹೆಗಳು ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದ ಅಭಿಪ್ರಾಯಗಳನ್ನು ವಾರ್ಡ್ ನ ನಾಗರೀಕರೊಂದಿಗೆ ಸಮಾಲೋಚನೆ ನಡೆಸಿದರು.

About The Author

Leave a Reply

Your email address will not be published. Required fields are marked *