
ಹಿರಿಯೂರು :
ತಾಲ್ಲೂಕಿನ “ಪ್ರಿಂಟ್ ಮೀಡಿಯಾ ಮತ್ತು ಸೋಶಿಯಲ್ ಮೀಡಿಯಾ” ಪತ್ರಕರ್ತರ ಸಂಘದ ವತಿಯಿಂದ ನಗರದ ಗುರುಭವನದಲ್ಲಿ ಇದೇ ಆಗಸ್ಟ್ 9ರಂದು ಹಿರಿಯೂರು ತಾಲ್ಲೂಕು ಘಟಕದ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ಆಗಮಿಸಿ, ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂಬುದಾಗಿ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ಆಲೂರು ಹನುಮಂತರಾಯಪ್ಪನವರಲ್ಲಿ ಪ್ರಿಂಟ್ ಮೀಡಿಯಾ ಮತ್ತು ಸೋಶಿಯಲ್ ಮೀಡಿಯಾ ಪತ್ರಕರ್ತರ ಸಂಘದ ತಾಲ್ಲೂಕು ಅಧ್ಯಕ್ಷರಾದ ಬಿ.ಪಾತಲಿಂಗಪ್ಪ ಮನವಿ ಮಾಡಿದರು.

ನಗರದ ವಾಣಿವಿಲಾಸ ವಿದ್ಯಾಸಂಸ್ಥೆ ಸಭಾಂಗಣದಲ್ಲಿ “ಕರ್ನಾಟಕ ರಾಜ್ಯ ಪ್ರಿಂಟ್ ಮೀಡಿಯಾ ಮತ್ತು ಸೋಶಿಯಲ್ ಮೀಡಿಯಾ” ಪತ್ರಕರ್ತರ ಸಂಘದ ವತಿಯಿಂದ ಇದೇ ಆಗಸ್ಟ್ 9ರಂದು ಹಿರಿಯೂರು ತಾಲ್ಲೂಕು ಘಟಕದ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕ್ಕೆ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ಆಲೂರು ಹನುಮಂತರಾಯಪ್ಪನವರನ್ನು ಆಹ್ವಾನಿಸಿ, ಅವರು ಮಾತನಾಡಿದರು.

ಆಹ್ವಾನ ಪತ್ರಿಕೆ ಸ್ವೀಕರಿಸಿ ಮಾತನಾಡಿದ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ಆಲೂರು ಹನುಮಂತರಾಯಪ್ಪನವರು ಪ್ರಿಂಟ್ ಮೀಡಿಯಾ ಮತ್ತು ಸೋಶಿಯಲ್ ಮೀಡಿಯಾ ಪತ್ರಕರ್ತರ ಸಂಘ ಸದಾ ಸಮಾಜಮುಖಿಯಾಗಿ ಕೆಲಸ ಮಾಡಲಿ, ಈ ರೀತಿಯ ನಿಮ್ಮ ಎಲ್ಲಾ ಕೆಲಸಗಳಿಗೆ ನಮ್ಮ ಬೆಂಬಲವಿರುತ್ತದೆ, ನಿಮ್ಮ ಸಂಘವನ್ನು ಕಳಂಕಮುಕ್ತ, ಭ್ರಷ್ಟಾಚಾರಮುಕ್ತ ಸಂಘವಾಗಿ ಮುನ್ನಡೆಸಿ, ನಿಮ್ಮ ಪ್ರಾಮಾಣಿಕ ಪತ್ರಿಕೋದ್ಯಮ ನಿಮ್ಮ ಸಂಘವನ್ನು ಯಶಸ್ಸಿನತ್ತ ಕೊಂಡೊಯ್ಯತ್ತದೆ ಎಂಬುದಾಗಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ಆಲೂರು ಹನುಮಂತರಾಯಪ್ಪ, ಪ್ರಿಂಟ್ ಮೀಡಿಯಾ ಮತ್ತು ಸೋಶಿಯಲ್ ಮೀಡಿಯಾ ಪತ್ರಕರ್ತರ ಸಂಘದ ತಾಲ್ಲೂಕು ಅಧ್ಯಕ್ಷರಾದ ಬಿ.ಪಾತಲಿಂಗಪ್ಪವೇಣುಕಲ್ಲುಗುಡ್ಡ, ಸದಸ್ಯರುಗಳಾದ ಜಗನ್ನಾಥ್ ಕೂಡ್ಲಹಳ್ಳಿ, ಪಿ.ಪಾತಲಿಂಗಪ್ಪವೇಣುಕಲ್ಲುಗುಡ್ಡ, ಜಾಗೃತಿ ಕಿರಣ ಪತ್ರಿಕೆ ಸಂಪಾದಕ ಸ್ವಾಮಿಲಿಂಗಪ್ಪಶಿರಾ ಸೇರಿದಂತೆ ಇತರರು ಉಪಸ್ಥಿತರಿದ್ದರು.
