August 7, 2026
003

ಹಿರಿಯೂರು :

ಇಂದಿನ ವಿದ್ಯಾರ್ಥಿಗಳು ಗುರುಗಳ ಹಾಗೂ ಪೋಷಕರ ಮಾರ್ಗದರ್ಶನದಲ್ಲಿ ನಡೆದು, ಮಾನಸಿಕ ಸ್ಥಿರತೆ ಕಾಪಾಡಿಕೊಂಡರೆ ಮಾತ್ರ ಉತ್ತಮ ಯಶಸ್ಸು ಸಾಧಿಸಬಹುದಾಗಿದ್ದು, ಪುಸ್ತಕಗಳನ್ನು ಓದುವ ಅಭ್ಯಾಸ ಮಾಡಿಕೊಂಡರೆ ಶಿಕ್ಷಣವಂತರಾಗಿ ಉನ್ನತಹುದ್ದೆ ಪಡೆದು, ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಹಾಯವಾಗುತ್ತದೆ ಎಂಬುದಾಗಿ ನಿವೃತ್ತ ಪ್ರಾಚಾರ್ಯರಾದ ಡಾ.ಮಹೇಶ್ ಹೇಳಿದರು.

ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ 2026-27 ನೇ ಸಾಲಿನ ಸಾಂಸ್ಕೃತಿಕ ಸಂಘ ಕ್ರೀಡಾ ಸಂಘ ಉದ್ಘಾಟನೆ, 2026ನೇ ಮಾರ್ಚ್ ನಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ, ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಂದ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಶ್ರೀಮತಿ ಕುಸುಮಾ ದೇಸಾಯಿ ಮಾತನಾಡಿ, ವಿದ್ಯಾರ್ಥಿಗಳು ಕ್ರೀಡಾಮನೋಭಾವ,ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಿ, ಸದೃಢವಾದ ದೇಹದಲ್ಲಿ ಸದೃಢವಾದ ಮನಸ್ಸು ಹೊಂದಬೇಕಾದರೆ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳಲ್ಲಿ ಹೆಚ್ಚು ಹೆಚ್ಚು ಭಾಗವಹಿಸುವುದು ಅತಿ ಮುಖ್ಯವಾಗಿದೆ ಎಂಬುದಾಗಿ ಹೇಳಿದರು.

ಇದೇ ಸಂದರ್ಭದಲ್ಲಿ ಕೆ.ಎಂ.ಜಗನ್ನಾಥ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಾಂಸ್ಕೃತಿಕ ಸಂಘದ ಕಾರ್ಯದರ್ಶಿ ಜೆ.ಲೋಕೇಶ್ ಪ್ರತಿಭಾಪುರಸ್ಕಾರ ಕಾರ್ಯಕ್ರಮ ನಡೆಸಿಕೊಟ್ಟರು. ವಿದ್ಯಾರ್ಥಿನಿ ಯಮುನಾ ಸ್ವಾಗತ ಕೋರಿದರು. ವಿದ್ಯಾರ್ಥಿನಿಯರಾದ ಜುಹಅಂಬರ, ವರ್ಷಿಣಿ ಕಾರ್ಯಕ್ರಮ ನಿರೂಪಿಸಿದರು. ಹರ್ಷಿದಬಾನು ವಂದನಾರ್ಪಣೆ ಮಾಡಿದರು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರಾದ ತಿಪ್ಪೇಸ್ವಾಮಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಚಿನ್ಮಹೇಶ್, ಲೋಹಿತಾಶ್ವ, ವಿಜಯಆಚಾರಿ, ಗುರುರಾಜ, ಅನಿಲ್ ಕುಮಾರ್, ತಿಮ್ಮಪ್ಪ, ಶ್ರೀಮತಿ ಮಂಜುಳಾ ಶ್ರೀಮತಿ ಲಕ್ಷ್ಮಿ, ಶ್ರೀಮತಿ ರಶ್ಮಿ, ಜನಾರ್ಧನ್, ರಾಜಶೇಖರ್, ರವೀಂದ್ರ, ರಂಗನಾಥ ,ಯೋಗಿರಾಜ, ಶ್ರೀಮತಿ ರೂಪ, ರಮೇಶ್, ಶ್ರೀಮತಿ ಕಾವ್ಯ, ಮಾನಸ ಇತರರು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *